ಕಳಸ: ನದಿಗೆ ಬಿದ್ದು ಮಹಿಳೆ ಮೃತ್ಯು

ಚಿಕ್ಕಮಗಳೂರು, ಜು.13: ಮಹಿಳೆಯೊಬ್ಬರು ನಡೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟಿರು ಘಟನೆ ಕಳಸ ಸಮೀಪದ ಬಾಳೆಹೊಳೆ ಗ್ರಾಮದ ಕಗ್ಗನಹಳ್ಳ ಎಂಬಲ್ಲಿ ನಡೆದಿದೆ.
ಮೃತರನ್ನು ಪಡೀಲ್ ನಿವಾಸಿ ಜಾನಕಿ(55) ಎಂದು ಗುರುತಿಸಲಾಗಿದೆ.
ಜಾನಕಿ ಜು.11ರಂದು ಸಂಜೆ 6 ಗಂಟೆ ಸುಮಾರಿಗೆ ನಡೆದುಕೊಂಡು ಹೋಗುವಾಗ ಆಯತಪ್ಪಿ ಭದ್ರಾ ನದಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕುಟುಂಬಸ್ಥರು ಸೋಮವಾರ 12 ಗಂಟೆಯವರೆಗೆ ಹುಡುಕಾಟ ನಡೆಸಿದರು ಮೃತದೇಹ ಸಿಕ್ಕಿರಲಿಲ್ಲ. ಬಳಿಕ ಸ್ಥಳೀಯ ಮುಳುಗುತಜ್ಞ ಭಾಸ್ಕರ್ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸದಸ್ಯರಿಗೆ ಮಾಹಿತಿ ನೀಡಲಾಯಿತು. ಅವರು ಸ್ಥಳಕ್ಕಾಗಮಿಸಿ ಸತತ 4 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನದಿಯಿಂದ ಮೇಲೆತ್ತಿದರು.
ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Story





