Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಝಿಕಾ: ಮುಂಜಾಗೃತಾ ಕ್ರಮಕ್ಕೆ ದ.ಕ....

ಝಿಕಾ: ಮುಂಜಾಗೃತಾ ಕ್ರಮಕ್ಕೆ ದ.ಕ. ಜಿಪಂನಿಂದ ಗ್ರಾಪಂಗಳಿಗೆ ಸುತ್ತೋಲೆ

ವಾರ್ತಾಭಾರತಿವಾರ್ತಾಭಾರತಿ13 July 2021 4:14 PM IST
share
ಝಿಕಾ: ಮುಂಜಾಗೃತಾ ಕ್ರಮಕ್ಕೆ ದ.ಕ. ಜಿಪಂನಿಂದ ಗ್ರಾಪಂಗಳಿಗೆ ಸುತ್ತೋಲೆ

ಮಂಗಳೂರು, ಜು 13: ನೆರೆಯ ರಾಜ್ಯವಾದ ಕೇರಳದಲ್ಲಿ ಝಿಕಾ ವೈರಸ್ ಪ್ರಕರಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಗ್ರಾಪಂಗಳಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.

ತಿರುವನಂತಪುರದಲ್ಲಿ ಝಿಕಾ ವೈರಸ್ ಸೋಂಕು ವರದಿಯಾಗುತ್ತಿದ್ದು, ದ.ಕ. ಜಿಲ್ಲೆಯು ಕೇರಳದ ಗಡಿ ಭಾಗದಲ್ಲಿರುವುದರಿಂದ ಹಾಗೂ ಕೇರಳದಿಂದ ಸಾಕಷ್ಟು ಜನರು ಶಿಕ್ಷಣ ಹಾಗೂ ಆರೋಗ್ಯ ಸಂಬಂಧಿ ಕಾರ್ಯಗಳಿಗೆ ಬಂದು ಹೋಗುತ್ತಿರುವುದರಿಂದ ಜಿಲ್ಲೆಯಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಯಾವುದೇ ಜ್ವರವಿದ್ದರೂ ಸಮೀಪದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸುವಂತೆ ಗ್ರಾಮಸ್ಥರಿಗೆ ಮಾಹಿತಿ ನೀಡಬೇಕು. ಸಾರ್ವಜನಿಕ ಸ್ಥಳ, ಧಾರ್ಮಿಕ ಕ್ಷೇತ್ರಗಳು, ಪ್ರೇಕ್ಷಣಾ ಸ್ಥಳಗಳಲ್ಲಿ ಸ್ವಚ್ಛತೆ ಹಾಗೂ ಸೊಳ್ಳೆ ಉತ್ಪತ್ತಿ ತಾಣಗಳ ನಿಯಂತ್ರಣ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳುವುದು. ಚರಂಡಿ, ರಸ್ತೆ, ತೆರೆದ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳುವುದು, ಘನತ್ಯಾಜ್ಯ ವಸ್ತುಗಳನ್ನು ಎಸೆಯವುದರಿಂದ ಅವುಗಳಲ್ಲಿ ನೀರು ಶೇಖರವಾಗಿ ಸೊಳ್ಳೆ ಬೆಳವಣಿಗೆಗೆ ಅವಕಾಶವಿರುತ್ತದೆ. ಇದರ ನಿವರಣಾ ಕ್ರಮದ ಭಾಗವಾಗಿ ಸಮರ್ಪಕ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳುವುದು. ಸಾರ್ವಜನಿಕರು ಮನೆ ಪರಿಸರದಲ್ಲಿ ನೀರು ನಿಲ್ಲದಂತೆ ಹಾಗೂ ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳಲು ಗ್ರಾಮ ಸಭೆಗಳಲ್ಲಿ ಸೂಚನೆ ನೀಡುವುದು, ಅಂಗಡಿ ಮುಂಗಟ್ಟುಗಳ ಬಳಿ ಇರುವ ತಂಪು ಪಾನೀಯಗಳ ಖಾಲಿ ಬಾಟಲಿಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರಿಗೆ ಸೂಚನೆ ನೀಡವುವುದು. ಗುಜರಿ ಅಂಗಡಿಗಳಲ್ಲಿ ಇರುವ ನಿರುಪಯುಕ್ತ ವಸ್ತು, ಸಾಮಗ್ರಿಗಳಲ್ಲಿ ನೀರು ಶೇಖರವಾಗದಂತೆ ಅಂಗಡಿ ಮಾಲಕರಿಗೆ ಸೂಚಿಸುವುದು, ಕ್ರಮ ವಹಿಸದಿದ್ದರೆ ದಂಡ ವಸೂಲು ಮಾಡುವ ಕ್ರಮಗಳನ್ನು ಕೈಗೊಳ್ಳುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಝಿಕಾ ವೈರಸ್ ಸೋಂಕು ಈಡಿಸ್ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈಡಿಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ತೆರೆದ ಸ್ವಚ್ಛ ನೀರಿನ ಸಂಗ್ರಹಗಳಾದ ಸಿಮೆಂಟ್ ತೊಟ್ಟಿ, ಬ್ಯಾರೆಲ್, ಇತರ ನೀರಿನ ಸಂಗ್ರಹಗಳು, ಹೂವಿನ ಕುಂಡಗಳು, ಮನೆಯ ಮೇಲ್ಛಾವಣಿಯಲ್ಲಿ ನಿಂತ ನೀರು, ಟಯರ್, ಘನತ್ಯಾಜ್ಯ ವಸ್ತುಗಳಲ್ಲಿ ಇವು ಉತ್ಪತ್ತಿಯಾಗುತ್ತವೆ. ಫಾಗಿಂಗ್ ನಡೆಸುವುದಾದರೆ ಅಗತ್ಯ ಇಂಧನ, ಸಿಬ್ಬಂದಿ ಒದಗಿಸುವಂತೆಯೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X