Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿಯಲ್ಲಿ ಶೀಘ್ರದಲ್ಲೇ...

ಮಂಗಳೂರು ವಿವಿಯಲ್ಲಿ ಶೀಘ್ರದಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ: ಪ್ರೊ.ಯಡಪಡಿತ್ತಾಯ

ಮಂಗಳೂರು ವಿವಿಯಲ್ಲಿ ನಾಲ್ಕು ಕೃತಿಗಳು ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ13 July 2021 4:27 PM IST
share
ಮಂಗಳೂರು ವಿವಿಯಲ್ಲಿ ಶೀಘ್ರದಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ: ಪ್ರೊ.ಯಡಪಡಿತ್ತಾಯ

ಕೊಣಾಜೆ, ಜು.13: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಲಾಗುವುದು. ಅದರಲ್ಲಿ ಸಂಶೋಧನೆಗೆ ವಿಶೇಷ ಒತ್ತು ನೀಡುವ ಉದ್ದೇಶದಿಂದ ಈಗಾಗಲೇ ಕ್ರಿಯಾಸಮಿತಿಯನ್ನು ರಚಿಸಲಾಗಿದ್ದು, ಪ್ರಸಾರಾಂಗದ ಮೂಲಕ ಸಂಶೋಧನ ಕೃತಿಗಳ ಪ್ರಕಟನೆಯನ್ನು ಉತ್ತೇಜಿಸಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ಹೇಳಿದ್ದಾರೆ.

ಪ್ರಸಾರಾಂಗ ಪ್ರಕಟಿಸಿದ ನಾಲ್ಕು ಕೃತಿಗಳನ್ನು ಮಂಗಳವಾರ ಮಂಗಳೂರು ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

 ಡಾ.ಎನ್.ಸುಕುಮಾರ ಗೌಡಯವರ 'An introduction to English Language Curriculum', ಡಾ.ಸಾಯಿಗೀತಾ ಅವರ ತುಳುವ ನೆಲೆ, ಬಿ.ಎ.ಶಂಸುದ್ದೀನ್ ಅವರ ವಿಶಿಷ್ಟ ಬ್ಯಾರಿ ಜನಾಂಗ, ಮುದ್ದು ಮೂಡುಬೆಳ್ಳೆ ಅವರ 'ಪರಿವರ್ತನಶೀಲ ತುಳು ರಂಗಭೂಮಿ' ಕೃತಿಗಳನ್ನು ಅವರು ಬಿಡುಗಡೆಗೊಳಿಸಿದರು.

ವೃತ್ತಿಯ ಜೊತೆಗೆ ಪ್ರವೃತ್ತಿ, ಸಮಾಜಮುಖಿ ಚಿಂತನೆಗಳನ್ನು ರೂಢಿಸಿಕೊಂಡಾಗ ಮನುಷ್ಯನ ವ್ಯಕ್ತಿತ್ವಕ್ಕೆ ಘನತೆ ಬರುತ್ತದೆ ಎಂದ ಅವರು, ಬ್ಯಾರಿ ಸಾಹಿತ್ಯ ಮತ್ತು ತುಳು ರಂಗಭೂಮಿಯ ಬಗೆಗೆ ಸಮಗ್ರ ಸೂಕ್ಷ್ಮ ಅಧ್ಯಯನಗಳು ಆಗಬೇಕಿವೆ ಎಂದರು.

ವಿವಿಯ ಹಣಕಾಸು ಅಧಿಕಾರಿ ಪ್ರೊ.ಬಿ.ನಾರಾಯಣ ಮಾತನಾಡಿ, ಸ್ಥಳೀಯ ಭಾಷೆ ಸಾಹಿತ್ಯ ಸಂಸ್ಕೃತಿಯ ಕುರಿತಾದ ಪ್ರಕಟನೆಗಳನ್ನು ಪ್ರಸಾರಾಂಗದ ಮೂಲಕ ಪ್ರಕಟಿಸಲು ಅವಕಾಶವಿದೆ ಎಂದರು.

ಲೇಖಕರಾದ ಡಾ.ಎನ್.ಸುಕುಮಾರ ಗೌಡ ಪುತ್ತೂರು, ಡಾ.ಸಾಯಿಗೀತಾ ದೇರಳಕಟ್ಟೆ, ಬಿ.ಎ.ಶಂಸುದ್ದೀನ್ ಮಡಿಕೇರಿ, ಮುದ್ದು ಮೂಡುಬೆಳ್ಳೆ ಮಾತನಾಡಿದರು.

ಪ್ರಸಾರಾಂಗದ ನಿರ್ದೇಶಕ ಪ್ರೊ. ಅಭಯಕುಮಾರ್ ಪ್ರಸ್ತಾವನೆ ಮಾಡಿದರು. ಸಹಾಯಕ ನಿರ್ದೇಶಕ ಡಾ.ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು. ಬ್ಯಾರಿ ಅಧ್ಯಯನ ಪೀಠದ ಸಲಹಾ ಸಮಿತಿಯ ಸದಸ್ಯ ಅಬ್ದುಲ್ ರಹ್ಮಾನ್ ಕುತ್ತೆತ್ತೂರು, ವಿವಿಯ ಗ್ರಂಥಾಲಯದ ಮುಖ್ಯಸ್ಥ ಡಾ.ಪುರುಷೋತ್ತಮ ಗೌಡ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಸಾಹಿತ್ಯದ ವಾತಾವರಣ ಇದ್ದಲ್ಲಿ ಸಾಹಿತಿಗಳು, ಸಾಹಿತ್ಯದ ಕೆಲಸಗಳು ಹೆಚ್ಚೆಚ್ಚು ನಡೆಯುತ್ತವೆ. ಮಂಗಳೂರು ವಿವಿಯ ಬ್ಯಾರಿ ಅಧ್ಯಯನ ಪೀಠದಿಂದ ಬ್ಯಾರಿ ಜನಾಂಗದ ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಸಮಗ್ರ ಸಂಪುಟವೊಂದು ರಚನೆಯಾಗಬೇಕಿದೆ. ಇದು ಬಹಳ ಅಗತ್ಯದ ಹಾಗೂ ಮಹತ್ವದ ಕೃತಿಯಾಗಲಿದೆ.

ಬಿ.ಎ.ಸಂಶುದ್ದೀನ್, ಸಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X