Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಸಿಕ್: ಸೋರಿಕೆಯಾದ ಆಮಂತ್ರಣ ಪತ್ರಿಕೆ,...

ನಾಸಿಕ್: ಸೋರಿಕೆಯಾದ ಆಮಂತ್ರಣ ಪತ್ರಿಕೆ, ಬೆದರಿಕೆಗಳ ನಂತರ ಅಂತರ್ಧಮೀಯ ವಿವಾಹ ಕಾರ್ಯಕ್ರಮ ರದ್ದು

ವಾರ್ತಾಭಾರತಿವಾರ್ತಾಭಾರತಿ13 July 2021 4:37 PM IST
share
ನಾಸಿಕ್: ಸೋರಿಕೆಯಾದ ಆಮಂತ್ರಣ ಪತ್ರಿಕೆ, ಬೆದರಿಕೆಗಳ ನಂತರ ಅಂತರ್ಧಮೀಯ ವಿವಾಹ ಕಾರ್ಯಕ್ರಮ ರದ್ದು

ಹೊಸದಿಲ್ಲಿ: ಹಿಂದು ಯುವತಿ ಮತ್ತು ಮುಸ್ಲಿಂ ಯುವಕನ ನಡುವೆ ನಾಸಿಕ್‍ನಲ್ಲಿ ಜುಲೈ 18ರಂದು ನಡೆಯಬೇಕಿದ್ದ ವಿವಾಹ ಸಂಬಂಧಿತ ಸಮಾರಂಭದ ಆಮಂತ್ರಣ ಪತ್ರಿಕೆಗಳು ಅಂತರ್ಜಾಲದಲ್ಲಿ ಸೋರಿಕೆಯಾಗಿ ಹಲವಾರು ವಾಟ್ಸ್ಯಾಪ್ ಗ್ರೂಪುಗಳಲ್ಲಿ ಶೇರ್ ಕೂಡ ಆದ ಪರಿಣಾಮ ಇದೊಂದು ಲವ್ ಜಿಹಾದ್ ಪ್ರಕರಣ ಎಂದು ಕೆಲವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಮಾರಂಭವನ್ನು ರದ್ದುಗೊಳಿಸಲಾಗಿದೆ.

ಸಮಾರಂಭ ರದ್ದುಗೊಂಡಿದೆಯಾದರೂ ಜೋಡಿ ಈಗಾಗಲೇ ನಾಸಿಕ್ ನ್ಯಾಯಾಲಯದಲ್ಲಿ ಎರಡೂ ಕುಟುಂಬಗಳ ಸದಸ್ಯರ ಉಪಸ್ಥಿತಿಯಲ್ಲಿ ವಿವಾಹವನ್ನು ಮೇ ತಿಂಗಳಿನಲ್ಲಿಯೇ ನೋಂದಣಿ ಮಾಡಿದೆ. ಜುಲೈ 18ರಂದು ಹಿಂದು ಸಂಪ್ರದಾಯದಂತೆ ಕೆಲ ಕಾರ್ಯಕ್ರಮಗಳು ವಧುವನ್ನು  ಆಕೆಯ ಪತಿಯ ಮನೆಗೆ ಕಳುಹಿಸುವ ಮೊದಲು ಏರ್ಪಡಿಸಲಾಗಿತ್ತು.

ವಧುವಿನ ತಂದೆ ಸ್ಥಳೀಯವಾಗಿ ಜನಪ್ರಿಯವಾಗಿರುವ ಚಿನ್ನಾಭರಣ ಅಂಗಡಿ ಮಾಲಿಕರಾಗಿದ್ದಾರೆ. ವಧುವಿಗೆ ಕೆಲವೊಂದು ಅಂಗ ಊನತೆ ಇರುವುದರಿಂದ ಆಕೆಯ ವಿವಾಹಕ್ಕೆ ಕುಟುಂಬ ಬಹಳಷ್ಟು ಕಷ್ಟ ಪಟ್ಟಿತ್ತು. ಆದರೆ ಯುವತಿ ಮತ್ತಾಕೆಯ ಸಹಪಾಠಿ ವಿವಾಹವಾಗಲು ನಿರ್ಧರಿಸಿದ್ದರಿಂದ ರಿಜಿಸ್ಟರ್ಡ್ ವಿವಾಹ ನಡೆದಿತ್ತು. ಜುಲೈ 18ರಂದು ನಾಸಿಕ್‍ನ ಹೋಟೆಲ್ ಒಂದರಲ್ಲಿ ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ಒಂದು ಕಾರ್ಯಕ್ರಮ ನೆರವೇರಲಿತ್ತು. ಇದರ ಆಮಂತ್ರಣ ಪತ್ರಿಕೆ ಸೋರಿಕೆಯಾದ ನಂತರ ಈ ಕಾರ್ಯಕ್ರಮ ರದ್ದುಪಡಿಸಬೇಕೆಂದು ಕೆಲ ಹೊರಗಿನವರಿಂದಲೂ ಆಗ್ರಹ ಬಂದಿತ್ತೆನ್ನಲಾಗಿದೆ.

ತಮ್ಮ ಸಮುದಾಯದ ಸದಸ್ಯರೂ ಕಾರ್ಯಕ್ರಮ ನೆರವೇರಿಸದಂತೆ ಸಲಹೆ ನೀಡಿದ್ದರೆಂದು  ವಧುವಿನ ತಂದೆ ಹೇಳಿದ್ದಾರೆ. ಆದರೆ ಕೊನೆಗೆ ಅವರಿಬ್ಬರ ತೀರ್ಮಾನವೇ ಮುಖ್ಯ ಎಂದೂ ಅವರು ಹೇಳಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X