Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ’...

‘ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ’ ಕರ್ನಾಟಕ ಮಾದರಿ: ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ13 July 2021 5:04 PM IST
share
‘ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ’ ಕರ್ನಾಟಕ ಮಾದರಿ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಜು.13: ಇಡೀ ದೇಶದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಯನ್ನು ಹೊಂದಿದ ಮೊದಲ ರಾಜ್ಯ ಕರ್ನಾಟಕ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಮಂಗಳವಾರ ನಗರದ ತಲಘಟ್ಟಪುರ ಗ್ರಂಥಾಲಯದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದಿನ ಅವಶ್ಯಕತೆಗಳಿಗನುಗುಣವಾಗಿ ಡಿಜಿಟಲ್ ಗ್ರಂಥಾಲಯಗಳನ್ನು ರಾಜ್ಯಾದ್ಯಂತ ಸ್ಥಾಪಿಸಲು ಕ್ರಮ ವಹಿಸಲಾಗಿದೆ ಎಂದರು.

ಒಂದು ವರ್ಷದ ಅವಧಿಯಲ್ಲಿ ರಾಜ್ಯದೆಲ್ಲೆಡೆ 372 ಡಿಜಿಟಲ್ ಗ್ರಂಥಾಲಯಗಳು ಕಾರ್ಯಾರಂಭ ಮಾಡಿದ್ದು, ಇಡೀ ದೇಶದಲ್ಲಿ ಇದು ಅಭೂತ ಪ್ರಯತ್ನವಾಗಿದೆ. ಕೋವಿಡ್ ಸೃಷ್ಟಿಸಿದ ಸಾಮಾಜಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿಯೇ ಮೊದಲ ಉಪಕ್ರಮವಾಗಿ ಕರ್ನಾಟಕ ರಾಜ್ಯದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಡಿಜಿಟಲ್ ಗ್ರಂಥಾಲಯ ಮೊಬೈಲ್ ಆಪ್‍ನ್ನು ಲೋಕಾರ್ಪಣೆಗೊಳಿಸಿದ್ದು, ಹದಿನಾರು ಲಕ್ಷಕ್ಕೂ ಮೀರಿದ ಪುಸ್ತಕಗಳು ಮತ್ತು ಇ-ವಿಡಿಯೋ ಕಂಟೆಂಟ್‍ಗಳು ಈ ಆಪ್‍ನಲ್ಲಿ ಲಭ್ಯವಿವೆ. ಈ ತನಕ 83 ಲಕ್ಷ ಜನರು ಇದರ ಸದಸ್ಯತ್ವ ಪಡೆದಿದ್ದಾರೆ ಎಂದು ಅವರು ಹೇಳಿದರು.

ಪುಸ್ತಕ ಸಂಸ್ಕೃತಿ ಬೆಳೆಸಲು ರಾಜ್ಯಾದ್ಯಂತ 6,856 ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿದ್ದು, ಇದು ದೇಶದಲ್ಲಿಯೇ ಮಾದರಿ ಗ್ರಂಥಾಲಯ ವ್ಯವಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರ ಜ್ಞಾನಾರ್ಜನೆಗೆ ಉಪಯೋಗವಾಗುವಂತೆ ಗ್ರಂಥಾಲಯಗಳಲ್ಲಿ ಅವಶ್ಯಕ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.

ಈ ನಿವೇಶನದಲ್ಲಿ 99 ಲಕ್ಷ ರೂ. ವೆಚ್ಚದಲ್ಲಿ ಸ್ಥಳೀಯರಿಗೆ ಅನುಕೂಲವಾಗುವಂತೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗುವುದು. ಈ ಕಟ್ಟಡವು 3 ಅಂತಸ್ತಿನಿಂದ ಕೂಡಿದ್ದು, ಅದರಲ್ಲಿ ಮಹಿಳೆಯರಿಗೆ, ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ವಿವಿಧ ವಿಭಾಗಗಳನ್ನು ಸೃಜಿಸಲಾಗುವುದು. ಗ್ರಂಥಾಲಯದಲ್ಲಿ ವಿಶೇಷ ವಿಭಾಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಪ್ರತ್ಯೇಕ ವಿಭಾಗವಿರಲಿದೆ. ಹಾಗೆಯೇ ಡಿಜಿಟಲ್ ಲೈಬ್ರರಿ ಸೌಲಭ್ಯವೂ ಈ ಗ್ರಂಥಾಲಯದಲ್ಲಿ ದೊರೆಯಲಿದೆ ಎಂದು ಸುರೇಶ್ ಕುಮಾರ್ ಹೇಳಿದರು.
ಈ ಕಟ್ಟಡವನ್ನು ಆರೇಳು ತಿಂಗಳಿನಲ್ಲಿ ನಿರ್ಮಾಣ ಮಾಡಿ ಸಾರ್ವಜನಿಕ ಸೇವೆಗೆ ಸಮರ್ಪಣೆ ಮಾಡಲಾಗುವುದು ಎಂದು ಹೇಳಿದ ಸಚಿವರು, ಈ ಕುರಿತು ಹೆಚ್ಚಿನ ಗಮನ ಹರಿಸಬೇಕೆಂದು ಇಲಾಖೆಯ ನಿರ್ದೇಶಕರಿಗೆ ಸೂಚಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಗ್ರಂಥಾಲಯ ಇಲಾಖೆಯ ಡಿಜಿಟಲೀಕರಣ ವ್ಯವಸ್ಥೆಯಿಂದಾಗಿ ಮನೆಯಲ್ಲೇ ಕುಳಿತು ಗ್ರಂಥಗಳ ಅಧ್ಯಯನ ಮಾಡುವಂತ ವ್ಯವಸ್ಥೆ ರೂಪಿಸಿರುವುದು ಅತ್ಯಂತ ಉಪಯುಕ್ತವಾಗಿದೆ ಎಂದರು. 
ಮಹಾನಗರ ಪಾಲಿಕೆ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೀವ್ ಸೇರಿದಂತೆ ಗ್ರಂಥಾಲಯ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶ್ ಕುಮಾರ್ ಎಸ್. ಹೊಸಮನಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನಿರ್ದೇಶಕಿ ಸರಸ್ವತಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X