ಉಡುಪಿ ಸವಿತಾ ಸಮಾಜ ಸಹಕಾರಿಯಿಂದ ಪತ್ರಕರ್ತರಿಗೆ ಮಾಸ್ಕ್, ಸ್ಯಾನಿಟೈಜರ್ ವಿತರಣೆ

ಉಡುಪಿ, ಜು.13: ಉಡುಪಿಯ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಉಡುಪಿ ನಗರದ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್‌ಗಳನ್ನು ಇಂದು ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ವಿತರಿಸಲಾಯಿತು.
ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ನವೀನ್ ಚಂದ್ರ ಭಂಡಾರಿ, ಮಾಸ್ಕ್ ಮತ್ತು ಸ್ಯಾನಿಟೈಜರ್‌ಗಳನ್ನು ಉಡುಪಿ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ, ನಿರ್ದೇಶಕ ಸದಾಶಿವ ಬಂಗೇರ ಕುರ್ಕಾಲು, ಉಡುಪಿ ಜಿಲ್ಲಾ ಸವಿತಾ ಸಮಾಜ ಪ್ರಧಾನ ಕಾರ್ಯದರ್ಶಿ, ಶೇಖರ್ ಸಾಲಿಯಾನ್ ಆದಿಉಡುಪಿ, ಮುಖ್ಯ ಕಾರ್ಯನಿರ್ವಣಾಧಿಕಾರಿ ಮಾಲತಿ ಅಶೋಕ್, ಉಪ ಸಮಿತಿ ನಿರ್ದೇಶಕ ಭರತ್ ಸುವರ್ಣ ಹನುಮಂತ ನಗರ ಉಪಸ್ಥಿತರಿದ್ದರು.
Next Story





