ಸುಳ್ಯ ತಾಲೂಕಿನಾದ್ಯಂತ ಬಿ.ಎಂ.ಎಸ್ ಸಂಯೋಜಿತ ರಿಕ್ಷಾ ಚಾಲಕರ ಸಂಘ ಪ್ರತಿಭಟನೆ

ಸುಳ್ಯ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸಿ ಬಿ.ಎಂ.ಎಸ್ ಸಂಯೋಜಿತ ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘ ವತಿಯಿಂದ ಮಂಗಳವಾರ ತಾಲೂಕಿನಾದ್ಯಂತ ಪ್ರತಿಭಟನೆ ನಡೆಸಲಾಯಿತು.
ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹಾಗೂ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ ಅವರ ನೇತೃತ್ವದಲ್ಲಿ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಿಎಂಎಸ್ ಆಟೋ ನಿಲ್ದಾಣದಲ್ಲಿ ಪ್ರತಿಭಟನೆಯನ್ನು ನಡೆಸಿದರು. ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಪ್ರತಿಭಟನೆಯು ಏಕಕಾಲದಲ್ಲಿ ಸುಳ್ಯ ತಾಲೂಕಿನಾದ್ಯಂತ ನಡೆಯಿತು. ಸುಳ್ಯ ಹಳೇ ಬಸ್ ನಿಲ್ದಾಣ,ಗಾಂಧಿನಗರ, ಕುರುಂಜಿಭಾಗ್, ಶ್ರೀರಾಮಪೇಟೆ, ಸುಳ್ಯ ಸರ್ಕಾರಿ ಆಸ್ಪತ್ರೆಯ ಬಳಿ, ಪೈಚಾರು, ಜಾಲ್ಸೂರು, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು, ದೊಡ್ಡತೋಟ, ಉಬರಡ್ಕ, ಐವರ್ನಾಡು, ಮಕರ್ಂಜ ಕಲ್ಲುಗುಂಡಿ, ಮುಂತಾದ ನಿಲ್ದಾಣಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಪ್ರತಿಭಟನೆಗಳು ಆಯಾ ಪರಿಸರದ ಆಟೋಚಾಲಕರು ತಮ್ಮ-ತಮ್ಮ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆಯ ಬ್ಯಾನರನ್ನು ಅಳವಡಿಸಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟರು.
ಸಂಘದ ಕಾನೂನು ಸಲಹೆಗಾರ ಭಾಸ್ಕರ ರಾವ್, ಪ್ರ.ಕಾರ್ಯದರ್ಶಿ ಚಂದ್ರಶೇಖರ್ ಮಕರ್ಂಜ, ಮಾಜಿ ಅಧ್ಯಕ್ಷ ವಿಜಯ ಕುಮಾರ್ ಉಬರಡ್ಕ, ಸಮಿತಿಯ ಪದಾಧಿಕಾರಿಗಳಾದ ಮನೋಹರ ಚೊಕ್ಕಾಡಿ, ಹರೀಶ್ ನೆಕ್ರಾಜೆ ಮೊದಲಾದವರು ನೇತೃತ್ವ ವಹಿಸಿದ್ದರು.





