ಉಡುಪಿ: ಮಂಗಳವಾರ 96 ಮಂದಿಗೆ ಕೋವಿಡ್ ಪಾಸಿಟಿವ್

ಉಡುಪಿ, ಜು.13: ಜಿಲ್ಲೆಯಲ್ಲಿ ಮಂಗಳವಾರ 96 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ದಿನದಲ್ಲಿ 67 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 866 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್-19 ಸೋಂಕಿನಿಂದ 402 ಮಂದಿ ಮೃತಪಟ್ಟಿದ್ದಾರೆ. ಕೊರೋನ ಪಾಸಿಟಿವ್ ದೃಢಪಟ್ಟ 96 ಮಂದಿಯಲ್ಲಿ 50 ಮಂದಿ ಪುರುಷರು ಹಾಗೂ 46 ಮಂದಿ ಮಹಿಳೆಯರಿದ್ದಾರೆ. ಉಡುಪಿ ತಾಲೂಕಿನ 31, ಕುಂದಾಪುರ ತಾಲೂಕಿನ 36 ಹಾಗೂ ಕಾರ್ಕಳ ತಾಲೂಕಿನ 29 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 10 ಮಂದಿ ಕೋವಿಡ್ ಆಸ್ಪತ್ರೆ ಹಾಗೂ ಉಳಿದ 86 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಕೋವಿಡ್-19 ಸೋಂಕು ಇಂದು ಯಾವುದೇ ಬಲಿ ಪಡೆದಿಲ್ಲ. ಹೀಗಾಗಿ ಇದುವರೆಗೆ ಮೃತರ ಸಂಖ್ಯೆ 402ರಲ್ಲಿದೆ. ಕೊರೋನ ಪಾಸಿಟಿವ್ ದೃಢಪಟ್ಟ 96 ಮಂದಿಯಲ್ಲಿ 50 ಮಂದಿ ಪುರುಷರು ಹಾಗೂ 46 ಮಂದಿ ಮಹಿಳೆಯರಿದ್ದಾರೆ. ಉಡುಪಿ ತಾಲೂಕಿನ 31, ಕುಂದಾಪುರ ತಾಲೂಕಿನ 36 ಹಾಗೂ ಕಾರ್ಕಳ ತಾಲೂಕಿನ 29 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 10 ಮಂದಿ ಕೋವಿಡ್ ಆಸ್ಪತ್ರೆ ಹಾಗೂ ಉಳಿದ 86 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಸೋಮವಾರ 67 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 66,501ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 2507 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 67,769ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 7,18,759 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.
ಜಿಲ್ಲೆಯಲ್ಲಿ ಬ್ಲಾಕ್‌ಫಂಗಸ್ ಸೋಂಕಿಗಾಗಿ ಚಿಕಿತ್ಸೆಯಲ್ಲಿದ್ದ 9 ಮಂದಿಯಲ್ಲಿ ಮೂವರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಉಳಿದ 6 ಮಂದಿ ಸೋಂಕಿಗಾಗಿ ಈಗಲೂ ಚಿಕಿತ್ಸೆ ಪಡೆಯುತಿದ್ದಾರೆ.
4,360 ಮಂದಿಗೆ ಕೋವಿಡ್ ಲಸಿಕೆ
ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 4,360ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 3,062 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 1,298 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು 18ರಿಂದ 44 ವರ್ಷದೊಳಗಿನ 2,244 ಮಂದಿ ಮೊದಲ ಡೋಸ್ ಹಾಗೂ 90 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 813 ಮಂದಿ ಮೊದಲ ಡೋಸ್ ಹಾಗೂ 1,189 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. ಇಬ್ಬರು ಆರೋಗ್ಯ ಕಾರ್ಯಕರ್ತರು ಹಾಗೂ 22 ಮಂದಿ ಮುಂಚೂಣಿ ಕಾರ್ಯಕರ್ತರಿಗೂ ಇಂದು ಲಸಿಕೆ ನೀಡಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 4,49,863 ಮಂದಿ ಲಸಿಕೆಯ ಮೊದಲ ಡೋಸ್ ನ್ನು ಪಡೆದರೆ, 1,52,515 ಮಂದಿ ಎರಡನೇ ಡೋಸ್‌ನ್ನು ಪಡೆದುಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.







