ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಡಿ.ವಿ.ಸದಾನಂದಗೌಡ

ಮೈಸೂರು,ಜು.13: ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನದಂತೆ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು.
ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಮೇರೆಗೆ ರಾಜೀನಾಮೆ ನಿಡಿದ್ದೇನೆ. ಪಕ್ಷ ಸಂಘನಟನೆಯ ಮತ್ತು ಕೆಲವು ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯ ಸಿದ್ಧತೆಯ ದೃಷ್ಟಿಯಿಂದ ರಾಷ್ಟ್ರೀಯ ಅಧ್ಯಕ್ಷರು ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಬಿಜೆಪಿ ಪಕ್ಷ ದೊಡ್ಡದಾಗಿ ಬೆಳೆದಿದೆ. ಮೂರು ನಾಲ್ಕು ರಾಜ್ಯದಲ್ಲಿದ್ದ ಬಿಜೆಪಿ ಈಗ ಹದಿಮೂರು ರಾಜ್ಯಗಳಲ್ಲಿ ಅಧಿಕಾರ ಹಿಡಿದಿದೆ. ಪ್ರಧಾನಿ ನರೇಂದ್ರ ಮೋದಿ ಜಾಗತಿಕವಾಗಿ ಬೆಳೆದಿದ್ದಾರೆ ಎಂದು ಹೇಳಿದರು.
Next Story





