Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲ್ಲುಗಣಿಗಾರಿಕೆ ಭೋವಿ ಸಮುದಾಯಕ್ಕೆ...

ಕಲ್ಲುಗಣಿಗಾರಿಕೆ ಭೋವಿ ಸಮುದಾಯಕ್ಕೆ ಮೀಸಲಿಡಿ: ಎಚ್.ಡಿ.ಬಸವರಾಜು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ13 July 2021 9:52 PM IST
share

ಬೆಂಗಳೂರು, ಜು.13: ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕದಲ್ಲೂ ಕಲ್ಲು ಗಣಿಗಾರಿಕೆಯನ್ನು ಭೋವಿ ಸಮುದಾಯಕ್ಕೆ ಮೀಸಲಿಡಬೇಕೆಂದು ಆಮ್‍ಆದ್ಮಿ ಮುಖಂಡ ಹಾಗೂ ಮಾಜಿ ಶಾಸಕ ಎಚ್.ಡಿ.ಬಸವರಾಜು ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಲ್ಲು ಗಣಿಗಾರಿಕೆ ಕೇಂದ್ರಗಳನ್ನು ಬಂಡವಾಳಶಾಹಿಗಳಿಗೆ ನೀಡುವ ಮೂಲಕ ಭೋವಿ ಸಮಾಜವನ್ನು ವಂಚಿಸಲಾಗಿದೆ. ಮಹಾರಾಷ್ಟ್ರದಲ್ಲಿ ಕಲ್ಲು ಗಣಿಗಾರಿಕೆಯನ್ನು ಭೋವಿ ಸಮಾಜದವರಿಗೆ ಮೀಸಲಿರಿಸಲಾಗಿದೆ. ರಾಜ್ಯದಲ್ಲೂ ಗಣಿ ಮತ್ತು ಭೂವಿಜ್ಞಾನ ಕಾಯಿದೆಗೆ ತಿದ್ದುಪಡಿ ತಂದು ಭೋವಿ ಸಮಾಜದವರಿಗೆ ಮಾತ್ರ ಅನುಮತಿಯನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

ಅನೇಕ ಶತಮಾನಗಳಿಂದಲೂ ಭೋವಿ ಸಮಾಜದವರು ಕಲ್ಲು ಗಣಿಗಾರಿಕೆಯಲ್ಲಿ ಪ್ರಾಮಾಣಿಕವಾಗಿ ತೊಡಗಿಕೊಂಡಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಬಂಡವಾಳಶಾಹಿಗಳು, ಶಾಸಕರಿಗೆ, ರಾಜಕೀಯ ಬಲಾಢ್ಯರಿಗೆ ಮಾತ್ರ ಕ್ರಷರ್ ಯೂನಿಟ್‍ಗಳನ್ನು ನೀಡುವ ಮೂಲಕ ಭೋವಿ ಸಮಾಜದವರ ಉದ್ಯೋಗವನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯದ ಯಾವ ಶಾಸಕರು ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಂಡವಾಳಶಾಹಿಗಳಿಗೆ ನಾಡಿನ ಸಂಪನ್ಮೂಲದ ಮೇಲೆ ಯಾವುದೇ ರೀತಿಯ ಭಾವನಾತ್ಮಕ ಸಂಬಂಧ ಇರುವುದಿಲ್ಲ. ಕೇವಲ ದುಡ್ಡು ಮಾಡುವ ಉದ್ದೇಶ ಹೊಂದಿರುವ ಅವರು ರಾಜ್ಯದ ಸಂಪನ್ಮೂಲವನ್ನು ಸಾಧ್ಯವಾದಷ್ಟು ಲೂಟಿ ಮಾಡುತ್ತಿದ್ದಾರೆ. ಇದಕ್ಕಾಗಿ ಎಲ್ಲ ರೀತಿಯ ಅಕ್ರಮ ಮಾರ್ಗಗಳನ್ನು ಹುಡುಕಿಕೊಂಡಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕ್ರಷರ್ ಯೂನಿಟ್‍ಗಳನ್ನು ಆರಂಭಿಸಲು ಭೋವಿ ಸಮಾಜದವರಿಗೆ ಅತ್ಯಾಧುನಿಕ ಉಪಕರಣಗಳನ್ನು ಕೊಳ್ಳಲು ಆರ್ಥಿಕ ನೆರವು ನೀಡುವ ಯೋಜನೆಯನ್ನು ಆರಂಭಿಸಬೇಕು. ಇದರಿಂದ ಅವರಿಗೆ ಉದ್ಯೋಗ ಭದ್ರತೆ ಕಲ್ಪಿಸಿದಂತೆಯೂ ಆಗುತ್ತದೆ, ಬಂಡವಾಳಶಾಹಿಗಳ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಿದಂತೆಯೂ ಆಗುತ್ತದೆ. ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರಕಾರಕ್ಕೆ ಭೋವಿ ಸಮಾಜದ ಮೇಲೆ ಕಿಂಚಿತ್ತಾದರೂ ಕಾಳಜಿಯಿದ್ದರೆ ಕಾಯಿದೆಗೆ ತಿದ್ದುಪಡಿ ತರಲಿ ಎಂದು ಅವರು ಸವಾಲು ಹಾಕಿದ್ದಾರೆ.

ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಮಾತನಾಡಿ, ರಾಜ್ಯದಲ್ಲಿ ಮಾತ್ರವಲ್ಲದೇ ತಮಿಳುನಾಡು, ಆಂಧ್ರಪ್ರದೇಶದ ಭೋವಿ ಸಮಾಜದ ಅನೇಕರು ರಾಜ್ಯದ ಗಣಿಗಾರಿಕೆ ಪ್ರದೇಶದಲ್ಲಿ ಸರಿಯಾದ ವೇತನವಿಲ್ಲದೇ ಕೆಲಸ ಮಾಡುತ್ತಿದ್ದಾರೆ. ಸಮರ್ಪಕ ರಕ್ಷಣಾ ಸೌಲಭ್ಯಗಳಿಲ್ಲದೇ ಅನೇಕರು ಕೆಲಸ ಮಾಡುತ್ತಿರುವಾಗಲೇ ಮೃತಪಟ್ಟಿದ್ದಾರೆ. ಅವರ ಈ ಸಮಸ್ಯೆಗಳನ್ನು ಬಗೆಹರಿಸಿ, ನ್ಯಾಯ ಕೊಡಿಸುವುದರಲ್ಲಿ ರಾಜ್ಯದ ಕಾರ್ಮಿಕ ಇಲಾಖೆ ಸಂಪೂರ್ಣ ವಿಫಲವಾಗಿದೆಯೆಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಊಹೆಗೂ ನಿಲುಕದಷ್ಟು ದೊಡ್ಡ ಪ್ರಮಾಣದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಬೇಬಿ ಬೆಟ್ಟದಲ್ಲಿ ವರ್ಷಕ್ಕೆ ಗರಿಷ್ಠ 25,000 ಮೆಟ್ರಿಕ್ ಟನ್ ಕಲ್ಲು ತೆಗೆಯಲು ಮಾತ್ರ ಪರಿಸರ ಅನುಮೋದನಾ ಸಮಿತಿ ಅನುಮತಿ ನೀಡಿದೆ. ಆದರೆ, 2017ರಿಂದ ಪ್ರತಿವರ್ಷ ಲಕ್ಷಾಂತರ ಮೆಟ್ರಿಕ್ ಕಲ್ಲನ್ನು ತೆಗೆಯಲಾಗುತ್ತಿದೆ. ಇಲಾಖೆಯ ಇತ್ತೀಚಿನ ಮಾಹಿತಿ ಪ್ರಕಾರ ಬೇಬಿ ಬೆಟ್ಟವೊಂದರಲ್ಲೇ 280 ಕೋಟಿ ರೂ. ಹಾಗೂ ಮಂಡ್ಯ ಜಿಲ್ಲೆಯಲ್ಲಿ 320 ಕೋಟಿ ರೂ. ದಂಡ ಹಾಕಲಾಗಿದೆ. ರಾಜ್ಯಾದ್ಯಂತ ದಂಡದ ಮೊತ್ತವು ಸಾವಿರಾರು ಕೋಟಿಯಷ್ಟಿದೆ. ದಂಡವನ್ನು ವಸೂಲಿ ಮಾಡಲು ಸರ್ಕಾರ ಹಾಗೂ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಮುಖಂಡರಾದ ಪ್ರಕಾಶ್ ನಾಗರಾಜ್, ಉಷಾ ಮೋಹನ್, ಜ್ಯೋತಿಷ್ ಕುಮಾರ್ ಇನ್ನಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X