ಉಡುಪಿ: ವಕೀಲರ ಸಂಘದಿಂದ ವನಮಹೋತ್ಸವ

ಉಡುಪಿ, ಜು.13: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ ಉಡುಪಿ ವಲಯ ಹಾಗೂ ವಕೀಲರ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವನ ಮಹೋತ್ಸವದ ಅಂಗವಾಗಿ ನಡೆದ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ದಿವಾಕರ ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೊನಾಲ್ಡ್ ಪ್ರವೀಣ್ ಕುಮಾರ್, ಉಡುಪಿ ವಲಯದ ಉಪವಲಯ ಅರಣ್ಯಾಧಿಕಾರಿ ಗುರುರಾಜ ಕಾವ್ರಾಡಿ ಉಪಸ್ಥಿತರಿದ್ದರು.
Next Story