ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಕಾರ್ಯದರ್ಶಿಯಾಗಿ ಮುಹಮ್ಮದ್ ಅಝರುದ್ದೀನ್
![ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಕಾರ್ಯದರ್ಶಿಯಾಗಿ ಮುಹಮ್ಮದ್ ಅಝರುದ್ದೀನ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಕಾರ್ಯದರ್ಶಿಯಾಗಿ ಮುಹಮ್ಮದ್ ಅಝರುದ್ದೀನ್](/images/placeholder.jpg)
ಮಂಗಳೂರು, ಜು.13: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯನ್ನಾಗಿ ಕೊಡಿಜಾಲ್ನ ಮುಹಮ್ಮದ್ ಅಝರುದ್ದೀನ್ ಅವರನ್ನು ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ನೇಮಕಗೊಳಿಸಿ ಆದೇಶಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕು ಎಂದು ಆದೇಶದಲ್ಲಿ ತಿಳಿಸಿರುವುದಾಗಿ ಪ್ರಕಟನೆ ತಿಳಿಸಿದೆ.
Next Story