Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಾಷೆಯಾಗಿ ಕನ್ನಡ ಕಲಿಸದ ಶಾಲೆಗಳ ವಿರುದ್ಧ...

ಭಾಷೆಯಾಗಿ ಕನ್ನಡ ಕಲಿಸದ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ14 July 2021 1:24 PM IST
share
ಭಾಷೆಯಾಗಿ ಕನ್ನಡ ಕಲಿಸದ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

ಬೆಂಗಳೂರು, ಜು.14: ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಅನ್ವಯ ಕನ್ನಡವನ್ನು ರಾಜ್ಯದ ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ, ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಎಂದಿನಂತೆ ಮುಂದುವರಿಸಬೇಕು. ಈ ಕಾಯ್ದೆ ಉಲ್ಲಂಘಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಎಚ್ಚರಿಸಿದ್ದಾರೆ.

ಹೊರನಾಡು ಕನ್ನಡಿಗರ ಒಂದು ವರ್ಗ ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ ಎಂಬ ಹಿನ್ನೆಲೆಯಲ್ಲಿ ಅಧಿನಿಯಮ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸಚಿವರನ್ನು ಬುಧವಾರ ಭೇಟಿಯಾಗಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಈ ಎಚ್ಚರಿಕೆ ನೀಡಿದ್ದು, ಈ ಕುರಿತು ಕೂಡಲೇ ಸುತ್ತೋಲೆ ಹೊರಡಿಸಬೇಕೆಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧದ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೇ ಆಗಲಿ ಕನ್ನಡವನ್ನು ಕಡ್ಡಾಯವಾಗಿ ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯವಾಗಿದ್ದು, ಸರ್ಕಾರ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳು ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಪ್ರಕಾರ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದು ಕಡ್ಡಾಯವಾಗಿದೆ. ಒಂದರಿಂದ ಹತ್ತನೇ ತರಗತಿಯವರಿಗೆ ಹಂತಹಂತವಾಗಿ ಕನ್ನಡ ಭಾಷೆಯನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕಿದೆ. ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಹೊರ ರಾಜ್ಯದ ಪೋಷಕರ ಒಂದು ವರ್ಗ ವಿರೋಧಿಸಿ ಈ ಕಡ್ಡಾಯ ಕನ್ನಡ ಕಲಿಕೆಯನ್ನು ಕೈಬಿಡಬೇಕೆಂದು ಸಾಮಾಜಿಕ ಜಾಲತಾಣದ ಮೂಲಕ ಒತ್ತಾಯಿಸುತ್ತಿದ್ದು, ಇದು ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ಕ್ಕೆ ವಿರುದ್ಧವಾಗಿದೆ. ಅಲ್ಲದೇ ಈ ನೆಲದ ಸಂಸ್ಕೃತಿಯನ್ನು ವಿರೋಧಿಸುವಂತಹುದ್ದಾಗಿದೆ. ಈ ಕುರಿತಂತೆ ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಗಳು ಯಾವುದೇ ಆಗ್ರಹಕ್ಕೂ ಮಣಿಯದೇ ಕಟ್ಟುನಿಟ್ಟಾಗಿ ಕನ್ನಡ ಕಲಿಕೆಯನ್ನು ಕಡ್ಡಾಯವಾಗಿ ಕಲಿಸುವುದಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪೋಷಕರೂ ಕೂಡ ತಮ್ಮ ಜವಾಬ್ದಾರಿಯನ್ನು ಅರಿತು ಸರ್ಕಾರದ ಸದಾಶಯವನ್ನು ಗೌರವಿಸಬೇಕು. ತಮ್ಮ ಮಕ್ಕಳನ್ನು ನೆಲದ ಭಾಷೆ ಕಲಿಯಲು ಪ್ರೇರೇಪಿಸಬೇಕೆಂದು ಸಚಿವರು ಹೇಳಿದರು.

ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೂ ಸಹ ಯಾವುದೇ ಆಗ್ರಹಗಳಿಗೆ ಮಣಿಯದೇ ಮತ್ತು ಕನ್ನಡ ಕಲಿಕೆಯ ವಿಷಯದಲ್ಲಿ ಯಾವುದೇ ರೀತಿಯ ರಾಜಿಗೆ ಒಳಗಾಗದೇ ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಅನ್ವಯ ಕನ್ನಡವನ್ನು ತಮ್ಮ ಶಾಲೆಗಳಲ್ಲಿ ಕಡ್ಡಾಯವಾಗಿ, ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಎಂದಿನಂತೆ ಮುಂದುವರಿಸುವುದು ಮತ್ತು ಈ ಕಾಯ್ದೆ ಉಲ್ಲಂಘಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವ ಎಚ್ಚರಿಕೆ ನೀಡುವ ಕುರಿತು ಕೂಡಲೇ ಸುತ್ತೋಲೆ ಹೊರಡಿಸಬೇಕೆಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಆಯಾ ಮಟ್ಟದ ಇಲಾಖೆಯ ವಿಚಕ್ಷಣ ಅಧಿಕಾರಿಗಳು ಎಲ್ಲ ಶಾಲೆಗಳಿಗೂ ಭೇಟಿ ನೀಡಿ ಕಾಯ್ದೆಯ ಜಾರಿ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುವಂತೆ ಸಹ ಕೂಡಲೇ ನಿರ್ದೇಶನ  ನೀಡಲಾಗಿದೆ ಎಂದೂ ಸಚಿವರು ತಿಳಿಸಿದ್ದಾರೆ. 

ಈಗಾಗಲೇ ಬೆಂಗಳೂರಿನ ಕೇಂದ್ರ ಪಠ್ಯಕ್ರಮದ ಶಾಲೆಗಳ ಪ್ರಾಚಾರ್ಯರು ಮತ್ತು ಮುಖ್ಯಸ್ಥರ ಸಭೆಯನ್ನೂ ನಡೆಸಿ ಈ ಕುರಿತು ಕನ್ನಡ ಭಾಷಾ ಕಲಿಕೆಯನ್ನು ಕಡ್ಡಾಯವಾಗಿ ಅನುಸರಿಸುವಂತೆ ನಿರ್ದೇಶನ ನೀಡಲಾಗಿದೆ  ಎಂದವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X