Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯದಲ್ಲಿ ಕೋವಿಡ್ ಸಂತ್ರಸ್ತರ 81 ಕೋಟಿ...

ರಾಜ್ಯದಲ್ಲಿ ಕೋವಿಡ್ ಸಂತ್ರಸ್ತರ 81 ಕೋಟಿ ರೂ. ಸಾಲಮನ್ನಾ: ಸಚಿವ ಸೋಮಶೇಖರ

ಎಸ್ ಸಿಡಿಸಿಸಿ ಬ್ಯಾಂಕ್ ನಿಂದ 'ರೈತ ಸ್ಪಂದನ' ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ14 July 2021 3:50 PM IST
share
ರಾಜ್ಯದಲ್ಲಿ ಕೋವಿಡ್ ಸಂತ್ರಸ್ತರ 81 ಕೋಟಿ ರೂ. ಸಾಲಮನ್ನಾ: ಸಚಿವ ಸೋಮಶೇಖರ

ಮಂಗಳೂರು, ಜು.14: ರಾಜ್ಯದ ಕೋವಿಡ್ ಸಂತ್ರಸ್ತರ ಕುಟುಂಬದ 81 ಕೋಟಿ ರೂ. ರೈತರ ಸಾಲಮನ್ನಾ ಮಾಡುವ ಗುರಿಯನ್ನು ಸರಕಾರ ಹೊಂದಿದೆ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ವತಿಯಿಂದ ಹಮ್ಮಿಕೊಂಡ 'ರೈತ ಸ್ಪಂದನ' ಕಾರ್ಯಕ್ರಮದಲ್ಲಿ ಕೃಷಿಕರಿಗೆ ವಿವಿಧ ರೀತಿಯ ಸಾಲ ವಿತರಿಸಿ ಮಾತನಾಡುತ್ತಿದ್ದರು.

ಕೋವಿಡ್ ಸಂತ್ರಸ್ತ 10,400 ರೈತರ 81 ಕೋಟಿ ರೂ ಸಾಲವನ್ನು ಸಹಕಾರಿ ಸಂಘಗಳ ಮೂಲಕ ಮನ್ನಾ ಮಾಡುವ  ಗುರಿಯನ್ನು  ಸರಕಾರ ಹೊಂದಿದೆ. ಈ ನಿಟ್ಟಿನಲ್ಲಿ ಅವಿಭಜಿತ ದ.ಕ. ಜಿಲ್ಲೆಯಲ್ಲಿ 154 ಕೋವಿಡ್ ಸಂತ್ರಸ್ತರಿಗೆ ತಲಾ ಒಂದು ಲಕ್ಷ ರೂ. ಸಾಲಮನ್ನಾ ಯೋಜನೆಗೆ ಚಾಲನೆ ನೀಡುವ ಮೂಲಕ ರಾಜ್ಯದಲ್ಲಿ ಪ್ರಥಮವಾಗಿ ಮಾದರಿ ಕಾರ್ಯಕ್ರಮ ಮಾಡಿರುವುದು ಶ್ಲಾಘನೀಯ ಎಂದು ಸಚಿವ ಸೋಮಶೇಖರ್ ಮೆಚ್ಚುಗೆ ವ್ಯಕ್ತಪಡಿಸಿದರು.

  ರೈತ ಸ್ಪಂದನ ಕಾರ್ಯಕ್ರಮದ ಮೂಲಕ ಉಡುಪಿ, ದ.ಕ ಜಿಲ್ಲೆಯ ಸುಮಾರು 750ಕ್ಕೂ ಅಧಿಕ ರೈತರಿಗೆ ಸುಮಾರು 455 ಕೋಟಿ ರೂ.ಗಳಿಗೂ ಅಧಿಕ ಸಾಲ ನೀಡುವ ಕಾರ್ಯ ಕ್ರಮ ಹಮ್ಮಿಕೊಂಡಿರುವುದು ಮಹತ್ವದ ಹೆಜ್ಜೆಯಾಗಿದೆ ಎಂದು ಸಚಿವರು ಎಸ್.ಸಿ.ಡಿ.ಸಿ.ಸಿ. ಬ್ಯಾಂಕನ್ನು ಅಭಿನಂದಿಸಿದರು.

ರಾಜ್ಯದಲ್ಲಿ ಈ ಬಾರಿ ಸಹಕಾರಿ ಸಂಘಗಳ ಮೂಲಕ 30 ಲಕ್ಷದ ರೈತರಿಗೆ 20,810 ಕೋಟಿ ರೂ. ಸಾಲ ನೀಡುವ ಗುರಿ ಇದೆ ಎಂದ ಸಚಿವರು, ಕೋವಿಡ್ ಸಂದರ್ಭದಲ್ಲೂ ಸಹಕಾರಿ ರಂಗದ ರೈತರು ಶೇ.90ಕ್ಕೂ ಅಧಿಕ ಸಾಲ ಮರು ಪಾವತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ರೈತರ ಬೆಳೆಗೆ ಘೋಷಿಸಿದ ಬೆಂಬಲ ಬೆಲೆಯನ್ನು ಬಿಡುಗಡೆ ಮಾಡಲಾಗಿದೆ. ಕೊರೋನ ಸಂದರ್ಭದಲ್ಲಿ ಸಾಲ ಪಾವತಿಗೆ ಸಂಬಂಧಿಸಿದಂತೆ ಕೆಲವು ನಿಯಮಾವಳಿ ಸಡಿಲಿಕೆ ರಿಯಾಯಿತಿಯ ಬೇಡಿಕೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಸಚಿವ ಸೋಮಶೇಖರ ತಿಳಿಸಿದ್ದಾರೆ.

ಸಮಾರಂಭ ದ ಅಧ್ಯಕ್ಷತೆ ವಹಿಸಿದ್ದ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಸಹಕಾರಿ ಸಂಘ ಜನರ ಸಂಸ್ಥೆಯಾಗಿ ಬೆಳೆಯಲು ಸಹಕಾರಿ ಸಚಿವರು ಬೆಂಬಲ ನೀಡಿದ್ದಾರೆ. ಬ್ಯಾಂಕ್ ಕೋವಿಡ್ ಸಂದರ್ಭದ ಎಂದು ಜನರ ನೆರವಿಗೆ ನಿಂತಿದೆ. 26 ವರ್ಷದಲ್ಲಿ ನಿರಂತರ ಕೃಷಿ ಸಾಲ ಮರುಪಾವತಿ ಮಾಡಿದ ದೇಶದ ಅಗ್ರಸ್ಥಾನದ ಬ್ಯಾಂಕ್ ಎಸ್ ಸಿಡಿಸಿಸಿ ಬ್ಯಾಂಕ್ ಎನ್ನುವುದು ಹೆಮ್ಮೆಯ ಸಂಗತಿ. ಕೋವಿಡ್ ನಿಂದ ಮೃತಪಟ್ಟ ರೈತ ಕುಟುಂಬದ ಕೃಷಿ ಸಾಲದಲ್ಲಿ ಗರಿಷ್ಠ ಒಂದು ಲಕ್ಷ ರೂ. ಸಾಲ ಮನ್ನಾ ಮಾಡಲು ನಿರ್ಧರಿಸಿರುವುದು ರಾಜ್ಯದಲ್ಲಿ ಪ್ರಥಮ ಎಂದರು.

 ಕೋವಿಡ್ ಸಂಕಷ್ಟ ಸಮಯದಲ್ಲಿ ರೈತರಿಗೆ ಹಾಗೂ ಗ್ರಾಹಕರಿಗೆ ವಿಶಿಷ್ಟ ರೀತಿಯ ಸಾಲ ಸೌಲಭ್ಯವನ್ನು ನೀಡಲು ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಮುಂದಾಗಿದೆ. ಚಿನ್ನಾಭರಣ ಈಡಿನ ಸಾಲದ ಬಡ್ಡಿದರ ಇಳಿಕೆ ಮಾಡಲಾಗಿದ್ದು, ತಿಂಗಳ ಬಡ್ಡಿ ಕೇವಲ ಶೇ.0.75 ಆಗಿದೆ. ವಾಯುಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೆಟ್ರೋಲ್, ಡೀಸೆಲ್ ಇಂಧನ ಬಳಕೆ ಕಡಿತ ಮಾಡಲು ಇಲೆಕ್ಟ್ರಿಕ್ ವಾಹನಗಳ ಖರೀದಿಗೆ ಬ್ಯಾಂಕ್ ಉತ್ತೇಜನ ನೀಡಲು ಮುಂದಾಗಿದ್ದು, ಇಲೆಕ್ಟ್ರಿಕ್  ಸ್ಕೂಟರ್ ಹಾಗೂ ಇಲೆಕ್ಟ್ರಿಕ್ ಕಾರು ಖರೀದಿಸುವವರಿಗೆ ಸಾಮಾನ್ಯ ವಾಹನ ಸಾಲಬಡ್ಡಿಯಲ್ಲಿ ಶೇ.1.00ರ ರಿಯಾಯಿತಿ ನೀಡಲಾಗುವುದು ಎಂದು ಹೇಳಿದರು.

ಈಗಾಗಲೇ ಪ್ರತೀ ಜಿಲ್ಲೆಯಲ್ಲೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳ ಮೂಲಕ 'ರೈತ ಸ್ಪಂದನ' ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಸೂಚನೆ ನೀಡಿರುವ ರಾಜ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ಕಾರ್ಯಕ್ರಮದ ರೂವಾರಿಯಾಗಿದ್ದಾರೆ. 'ರೈತ ಸ್ಪಂದನ'ವು ಕೃಷಿಕರಿಗೆ, ಮೀನುಗಾರರಿಗೆ, ಹೈನುಗಾರಿಕಾ ಫಲಾನುಭವಿಗಳಿಗೆ ಹಾಗೂ ಸ್ವ-ಸಹಾಯ ಗುಂಪುಗಳಿಗೆ ಸಾಲ ವಿತರಿಸುವ ಕಾರ್ಯ ಕ್ರಮ ಎಂದು ಡಾ.ರಾಜೇಂದ್ರ ಕುಮಾರ್ ವಿವರಿಸಿದರು.

* ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ವ-ಸಹಾಯ ಸಂಘಗಳಿಗೆ ಸಾಲ ವಿತರಣೆ  ನೆರವೇರಿಸಿ ಶುಭ ಹಾರೈಸಿದರು.

ಪ್ರಧಾನ ಮಂತ್ರಿ ಸ್ವ-ನಿಧಿ ಸಾಲ ವಿತರಣೆಯನ್ನು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇದರ ಅಧ್ಯಕ್ಷ ಬೆಳ್ಳಿ ಪ್ರಕಾಶ್ ನೆರವೇರಿಸಿದರು. ಮೂಡುಬಿದಿರೆ ಶಾಸಕ ಉಮಾನಾಥ ಕೊಟ್ಯಾನ್ ಮೀನುಗಾರರ ಸಾಲ ವಿತರಣೆ ಕಾರ್ಯಕ್ರಮ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಶಾಸಕ ವೇದವ್ಯಾಸ ಕಾಮತ್, ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ  ಬಿ.ನಿರಂಜನ, ಟಿ.ಜಿ.ರಾಜರಾಮ ಭಟ್, ಎಂ.ವಾದಿರಾಜ ಶೆಟ್ಟಿ, ರಾಜು ಪೂಜಾರಿ, ಎಸ್.ಬಿ.ಜಯರಾಮ ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಮೋನಪ್ಪ ಶೆಟ್ಟಿ, ಕೆ.ಹರಿಶ್ಚಂದ್ರ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್, ಜೈರಾಜ್ ಬಿ., ಮೀನುಗಾರರ ಒಕ್ಕೂಟದ ಅಧ್ಯಕ್ಷ ಯಶ್ಪಾಲ್ ಸುವರ್ಣ, ಕೆಎಂಎಫ್ ದ.ಕ. ಜಿಲ್ಲಾಧ್ಯಕ್ಷ ರವಿರಾಜ ಹೆಗ್ಡೆ, ದ.ಕ. ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ಯ ರೈ, ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಇಂದ್ರಾಳಿ, ಅಪೆಕ್ಸ್ ಬ್ಯಾಂಕ್ ಸಿಇಒ ದೇವರಾಜ್ ಮೊದಲಾದವರು ಉಪಸ್ಥಿತರಿದ್ದರು.

ಬ್ಯಾಂಕಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿದರು. ಲಕ್ಷ್ಮಣ್ ಕುಮಾರ್ ಮಲ್ಲೂರ್ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಶಶಿಕುಮಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X