Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ...

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಪೂರ್ಣ: ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ14 July 2021 5:44 PM IST
share
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಪೂರ್ಣ: ಸಚಿವ ಸುರೇಶ್ ಕುಮಾರ್

ಬೆಂಗಳೂರು,ಜು.14:  ಜುಲೈ 19 ಮತ್ತು 22ರಂದು ನಿಗದಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈಗಾಗಲೇ ಸಿದ್ಧತೆಗಳ ಕುರಿತಂತೆ ಪರಿಶೀಲನೆ ನಡೆಸಿದ್ದಾರೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಸಿದ್ಧತೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ದೇಶಕರ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾರ್ಗದರ್ಶನ ನೀಡಿದ ಸಚಿವರು, ಯಾವುದೇ ಒಂದು ಮಗುವಿಗೂ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ಸಲಹೆ ನೀಡಿದರು.

ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಸಿದ್ಧತೆ ಕುರಿತು ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಗಳು ನಡೆದಿವೆ. ಡಿಸಿಗಳ ನೇತೃತ್ವದಲ್ಲಿ  ಸಿಇಒ, ಎಸ್.ಪಿ ಡಿಎಚ್ಒ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆಗಳು ನಡೆದಿದ್ದು, ಪರೀಕ್ಷಾ ಸಿದ್ಧತೆ ಮತ್ತು ಎಸ್ಒಪಿ ಪಾಲನೆ ಕುರಿತಂತೆ ನಿರ್ದೇಶನ ನೀಡಿದ್ದು, ಆಯಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಿದ್ದಾರೆಂದು ಸಚಿವರು ಹೇಳಿದರು.

ಮಕ್ಕಳಿಗೆ ಪರೀಕ್ಷಾಂಗಣ ಸುರಕ್ಷತೆ ಮತ್ತು ಆತ್ಮವಿಶ್ವಾಸದ ಭಾವಗಳನ್ನು ಮೂಡಿಸುವಂತೆ ಕ್ರಮ ವಹಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಈಗಾಗಲೇ ಒಎಂಆರ್ ಶೀಟ್ ಕುರಿತು ಹತ್ತಾರು ಬಾರಿ ತಿಳಿವಳಿಕೆ ಮೂಡಿಸಲಾಗಿದೆ. ಪರೀಕ್ಷಾ ಕೊಠಡಿಯಲ್ಲೂ ಪ್ರತಿ ವಿದ್ಯಾರ್ಥಿಗೂ ಕೊಠಡಿ ಮೇಲ್ವಿಚಾರಕರು ಈ ಕುರಿತು ಸೂಕ್ತ ಮಾರ್ಗದರ್ಶನ ನೀಡಲು ಸೂಚನೆ ನೀಡಲಾಗಿದೆ. ಯಾವುದೇ ರೀತಿಯಲ್ಲೂ ಗೊಂದಲವಾಗದಂತೆ ಗಮನ ಹರಿಸಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಪರೀಕ್ಷೆಗೂ ಎರಡು ದಿನಗಳ ಮೊದಲು ಪರೀಕ್ಷಾ ಪ್ರಕ್ರಿಯೆಗೆ ನೇಮಕವಾಗಿರುವ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್  ಸ್ವಯಂಸೇವಕರು ಪರೀಕ್ಷಾ ಕೇಂದ್ರದಲ್ಲಿ ಅಣಕು ಪರೀಕ್ಷಾ ಪ್ರಕ್ರಿಯೆ ನಡೆಸಲಿದ್ದಾರೆ. ಸ್ಯಾನಿಟೈಸರ್, ಮಾಸ್ಕ್, ಥರ್ಮಲ್ ಸ್ಕ್ಯಾನರ್ ಪೂರೈಕೆ ಸೇರಿದಂತೆ ಎಲ್ಲ ಕೇಂದ್ರಗಳಿಗೆ ಆರೋಗ್ಯ  ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್  ಸ್ವಯಂಸೇವಕರು, ಕೊಠಡಿ ಮೇಲ್ವಿಚಾರಕರು, ಪರೀಕ್ಷಾ ಕೇಂದ್ರದ ಅಧೀಕ್ಷಕರು  ಸೇರಿದಂತೆ ಅಗತ್ಯವಿರುವ ಎಲ್ಲ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಲಾಗಿದ್ದು, ಅವರೆಲ್ಲರಿಗೂ ತಂತಮ್ಮ ಕರ್ತವ್ಯದ ಪಟ್ಟಿಯನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.

ಕಳೆದ ಬಾರಿಗಿಂತ  ಹೆಚ್ಚಿನ ಸುರಕ್ಷಾ ವಾತಾವರಣದಲ್ಲಿ ಪರೀಕ್ಷೆಗಳು ನಡೆಯಲಿವೆ. ಪೋಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಸಂಪರ್ಕದಲ್ಲಿದ್ದು, ಪರೀಕ್ಷೆಗೆ ಸರ್ಕಾರ ಕೈಗೊಂಡಿರುವ ಎಲ್ಲ ಕ್ರಮಗಳನ್ನು ವಿವರಿಸಿದ್ದಾರೆ.   ಪೋಷಕರು ತಮ್ಮ ಮಕ್ಕಳನ್ನು ಧೈರ್ಯವಾಗಿ ಪರೀಕ್ಷೆಗೆ ಕಳಿಸಲು ಉತ್ಸುಕರಾಗಿದ್ದಾರೆಂದು ಸಚಿವರು ತಿಳಿಸಿದರು.  ಈಗಾಗಲೇ ತಾನು ಎಲ್ಲ ಡಿಡಿಪಿಐಗಳೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ್ದೇನೆ. ಎಲ್ಲರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿ ಕೊನೆ ಕ್ಷಣದ ಸೂಚನೆಗಳನ್ನು  ನೀಡಿದ್ದೇನೆ. ಪ್ರತಿಯೊಬ್ಬ ಅಧಿಕಾರಿಗಳು  ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಂಡಿದ್ದಾರೆ. ಯಾವುದೇ ಒಂದು ಮಗುವೂ ಸಹ ವಾಹನ ಸೌಲಭ್ಯವಿಲ್ಲದೇ ಪರೀಕ್ಷೆಗೆ ಗೈರು ಹಾಜರಾಗದಂತೆ ಗಮನಹರಿಸಲು ಕ್ರಮ ವಹಿಸಬೇಕೆಂದು  ಸೂಚನೆಗಳನ್ನು ನೀಡಲಾಗಿದೆ. ಮಕ್ಕಳ ಪರೀಕ್ಷಾ ಪ್ರವೇಶ ಪತ್ರ ಪ್ರದರ್ಶಿಸಿ ಮಕ್ಕಳು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಿ  ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ ಎಂದೂ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಅನೇಕ ಸಂಸ್ಥೆಗಳು, ಆಯಾ ಶಾಸಕರು, ಜನಪ್ರತಿನಿಧಿಗಳು ಆಯಾ ಭಾಗದ ಮಕ್ಕಳಿಗೆ ಪರೀಕ್ಷಾವಧಿ  ನಂತರ ಅಲ್ಲಲ್ಲಿ ನೀರಿನ ಬಾಟಲ್ ಮತ್ತು ಬಿಸ್ಕತ್, ಬ್ರೆಡ್ ಸೇರಿದಂತೆ ಸಿದ್ದಪಡಿಸಿದ ಅಹಾರಗಳಂತಹ  ಲುಘು ಉಪಹಾರ ವ್ಯವಸ್ಥೆ ಸಹ ಮಾಡಿದ್ದು, ಪರೀಕ್ಷೆಗೆ ಎಲ್ಲರ ಸಹಾಯ ಸಹಕಾರದ ಹಸ್ತ ಚಾಚಿದ್ದಾರೆ. ಪರೀಕ್ಷಾ ಕೇಂದ್ರಗಳು ಮಕ್ಕಳ ಸುರಕ್ಷಾ ಕೇಂದ್ರವಾಗಿರಲಿವೆ. ಪರೀಕ್ಷೆಯು ಮಕ್ಕಳಿಗೆ ಸಂಭ್ರಮದ ಹಬ್ಬವಾಗಿರಲಿದೆ. ಪರೀಕ್ಷಾಂಗಣವನ್ನು ಕ್ರೀಡಾಂಗಣವೆಂದು ಭಾವಿಸಿ ಖುಷಿಯ  ವಾತಾವರಣದಲ್ಲಿ ಪರೀಕ್ಷೆ ಬರೆಯಬೇಕೆಂದು  ಸಚಿವರು ಮನವಿ ಮಾಡಿದ್ದಾರೆ.

ಎಸ್ಒಪಿ ಪಾಲನೆಯೊಂದಿಗೆ ಪರೀಕ್ಷೆಗೆ ಮೊದಲು ಮತ್ತು ನಂತರ ಪರೀಕ್ಷಾ ಕೇಂದ್ರದ ಆವರಣ ಮತ್ತು  ಪರೀಕ್ಷಾ ಕೊಠಡಿಗಳನ್ನು  ಸ್ಯಾನಿಟೈಸ್ ಮಾಡಲು ಸಂಬಂಧಿಸಿದ ಅಧಿಕಾರಿಗಳು ಆಯಾ  ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದ್ದಾರೆ. ಡಿಡಿಪಿಐ ಮತ್ತು ಬಿಇಒಗಳು ತಮ್ಮ ವ್ಯಾಪ್ತಿಯ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈಗಾಗಲೇ ಶೇ. 100ರಷ್ಟು ಪರೀಕ್ಷಾ ಸಿಬ್ಬಂದಿ  ಕೋವಿಡ್ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆದವರಷ್ಟೇ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆಂದು ಸಚಿವರು ತಿಳಿಸಿದರು.  

ಹಾಲ್ ಟಿಕೆಟ್-ಬಿಇಒಗಳಿಗೆ ಸೂಚನೆ:

ಪೂರ್ಣ ಶುಲ್ಕ ಪಾವತಿಸದೇ ಇರುವುದರಿಂದ ಎಸ್ ಎಸ್ ಎಲ್  ಸಿ ಪರೀಕ್ಷೆಗೆ ಪ್ರವೇಶ  ಪತ್ರ ನೀಡಲು ನಿರಾಕರಿಸಿರುವಂತಹ ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಯಾವುದೇ ರೀತಿಯಲ್ಲೂ ಮಕ್ಕಳಿಗೆ ತೊಂದರೆಯಾಗದಂತೆ ಬಿಇಒಗಳು ಸೂಕ್ತ ಕ್ರಮ ವಹಿಸಲಿದ್ದಾರೆ. ಈ ಕುರಿತು ಯಾವುದೇ ಶಾಲೆಯೂ ಶುಲ್ಕ ಸಂಬಂಧದಲ್ಲಿ ಮಂಡಳಿ ಪರೀಕ್ಷೆಗೆ ಮಕ್ಕಳಿಗೆ ಪ್ರವೇಶ ಪತ್ರ ನಿರಾಕರಿಸದಂತೆ ಪರೀಕ್ಷಾ ಮಂಡಳಿ ಇಂದು  ಅಗತ್ಯ ಸುತ್ತೋಲೆ ಹೊರಡಿಸಲಿದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X