Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಲಿಂಪಿಕ್ ನಲ್ಲಿ ಚಿನ್ನ ಗೆದ್ದರೆ 5 ಕೋಟಿ...

ಒಲಿಂಪಿಕ್ ನಲ್ಲಿ ಚಿನ್ನ ಗೆದ್ದರೆ 5 ಕೋಟಿ ರೂ: ಸಿಎಂ ಘೋಷಣೆ

ಬೆಳ್ಳಿ ಪದಕ ಗೆದ್ದವರಿಗೆ 3 ಕೋಟಿ ರೂ.,ಕಂಚಿಗೆ 2 ಕೋಟಿ ರೂ. ► ಹತ್ತು ಲಕ್ಷ ರೂ. ಪ್ರೋತ್ಸಾಹಧನ

ವಾರ್ತಾಭಾರತಿವಾರ್ತಾಭಾರತಿ14 July 2021 8:00 PM IST
share
ಒಲಿಂಪಿಕ್ ನಲ್ಲಿ ಚಿನ್ನ ಗೆದ್ದರೆ 5 ಕೋಟಿ ರೂ: ಸಿಎಂ ಘೋಷಣೆ

ಬೆಂಗಳೂರು, ಜು.14: ಟೋಕಿಯೊ ಒಲಿಂಪಿಕ್ ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದವರಿಗೆ 5 ಕೋಟಿ ರೂ., ಬೆಳ್ಳಿಗೆ-3 ಹಾಗೂ ಕಂಚಿನ ಪದಕ ಗೆದ್ದವರಿಗೆ 2 ಕೋಟಿ ರೂ.ನೀಡಿ ಪುರಸ್ಕರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಜಪಾನ್ ನ ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಮೂವರು ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಘೋಷಣೆ ಮಾಡಲಾಗಿದ್ದ, ತಲಾ ಹತ್ತು ಲಕ್ಷ ರೂ. ಪ್ರೋತ್ಸಾಹಧನವನ್ನು ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿತರಿಸಿ ಮಾತನಾಡಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಒಲಿಂಪಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಕರ್ನಾಟಕದ ಕ್ರೀಡಾಪಟು ಶ್ರೀಹರಿ ನಟರಾಜ್ ಅವರಿಗೆ ಯಡಿಯೂರಪ್ಪ ಪ್ರೋತ್ಸಾಹಧನದ ಚೆಕ್ ವಿತರಿಸಿದರು.

ಅಧಿತಿ ಅಶೋಕ್, ಫವಾದ್ ಮಿರ್ಝಾ ಅವರ ಪರವಾಗಿ ಅವರ ಪಾಲಕರಿಗೆ ತಲಾ ಹತ್ತು ಲಕ್ಷ ರೂ.ಗಳ ಚೆಕ್ ಅನ್ನು ಯಡಿಯೂರಪ್ಪ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಹಸ್ತಾತಂತರಿಸಿ, ಶುಭಕೋರಿದರು.

ಈಜು ಸ್ಪರ್ಧೆ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಒಲಿಂಪಿಕ್ನಲ್ಲಿ ಭಾರತ ತಂಡ ಭಾಗವಹಿಸುತ್ತಿದೆ. ಮೂವರು ಕ್ರೀಡಾಪಟುಗಳು ಆಯ್ಕೆಯಾಗಿದ್ದು, ಅವರಲ್ಲಿ ಓರ್ವ ಕ್ರೀಡಾಪಟು ಕರ್ನಾಟಕದವರು ಎನ್ನುವುದು ನಮಗೆ ಹೆಮ್ಮೆ ವಿಚಾರ. ಒಲಿಂಪಿಕ್ಗೆ ಆಯ್ಕೆಯಾಗಿರುವ ಮೂವರೂ ಕ್ರೀಡಾಪಟುಗಳು ಚಿನ್ನದ ಪದಕ ಗೆದ್ದು ದೇಶದ ಕೀರ್ತಿಯನ್ನು ಹೆಚ್ಚಿಸಲಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಹೇಳಿದರು.

ಆದಿತಿ ಅಶೋಕ್ ಗಾಲ್ಫ್ ಕ್ರೀಡೆಯಲ್ಲಿ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. 2016ರಲ್ಲಿ ರಿಯೋ ಒಲಿಂಪಿಕ್ನಲ್ಲಿ ಪಾಲ್ಗೊಂಡಿದ್ದರು. 2016 ರಲ್ಲಿ ಹೀರೋ ವುಮನ್ ಇಂಡಿಯನ್ ಓಪನ್ ಚಾಂಪಿಯನ್ ಆಗಿದ್ದಾರೆ. 2017 ರಲ್ಲಿ ಫಾತಿಮಾ ಬಿಂತೆ ಮುಬಾರಕ್ ಲೇಡಿಸ್ ಒಪನ್ ಚಾಂಪಿಯನ್ ಆಗಿದ್ದಾರೆ. ಅಲ್ಲದೆ 2012 ರಲ್ಲಿ ಆಲ್ ಇಂಡಿಯಾ ಜೂನಿಯರ್ ಚಾಂಪಿಯನ್ ಶಿಪ್ ಹಾಗೂ 2014 ರಲ್ಲಿ ಆಲ್ ಇಂಡಿಯಾ ಲೇಡಿಸ್ ಅಂಡ್ ಗರ್ಲ್ ಚಾಂಪಿಯನ್ ಶಿಪ್ ಆಗಿ ಸಾಧನೆ ಮಾಡಿದ್ದಾರೆ. ಈಗ ಅಧಿತಿ ಅಶೋಕ್ ಭಾರತ ಕೀರ್ತಿ ಪತಾಕೆಯನ್ನು ಹಾರಿಸಲು ಟೋಕಿಯೋ ಓಲಿಂಪಿಕ್ಗೆ ತೆರಳುತ್ತಿದ್ದಾರೆ ಎಂದು ಅವರು ತಿಳಿಸಿದರು.

ಈಜುಪಟು ಶ್ರೀಹರಿ ನಟರಾಜ್ 2016 ರಲ್ಲಿ ಸೌತ್ ಏಷಿಯನ್ ಚಾಂಪಿಯನ್ ಷಿಪ್ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು. 2017 ರಲ್ಲಿ ಉಜೇಕಿಸ್ಥಾನ್ ನದಲ್ಲಿ ನಡೆದ 9ನೇ ಏಷಿಯನ್ ಚಾಂಪಿಯನ್ ಷಿಪ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. 2018 ರಲ್ಲಿ ಜಕಾರ್ತದಲ್ಲಿ ನಡೆದ ಏಷಿಯನ್ ಗೇಮ್ಸ್ ನಲ್ಲಿ ಪಾಲ್ಗೊಂಡಿದ್ದಾರೆ. 2016ರಲ್ಲಿ ರಾಂಚಿಯಲ್ಲಿ ಆಯೋಜಿಸಿದ್ದ 70ನೇ ಸೀನಿಯರ್ ಚಾಂಪಿಯನ್ ಷಿಪ್ ನಲ್ಲಿ ಕಂಚು, 2017ರಲ್ಲಿ ಇಂದೋರ್ನಲ್ಲಿ ನಡೆದ 71ನೇ ಸೀನಿಯರ್ ನ್ಯಾಷನಲ್ ಚಾಂಪಿಯನ್ ಷಿಪ್ನಲ್ಲಿ ಚಿನ್ನ, ಹಾಗೂ 2018 ರಲ್ಲಿ ಕೇರಳದಲ್ಲಿ ನಡೆದ 72ನೇ ಸೀನಿಯರ್ ನ್ಯಾಷನಲ್ ಚಾಂಪಿಯನ್ ಷಿಪ್ ನಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಪ್ರಸ್ತುತ ಟೋಕಿಯೋ ಓಲಿಂಪಿಕ್ಗೆ ಶ್ರೀಹರಿ ನಟರಾಜ್ ಆಯ್ಕೆಯಾಗಿದ್ದಾರೆ ಎಂದು ನಾರಾಯಣಗೌಡ ಹೇಳಿದರು.

ಈಕ್ವೆಸ್ಟಿಯನ್ ಪಟು ಫವಾದ್ ಮಿರ್ಝಾ 2018ರಲ್ಲಿ ನಡೆದ 18ನೇ ಏಷಿಯನ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದಿದ್ದು, ಈಗ ಟೋಕಿಯೋ ಒಲಿಂಪಿಕ್ಗೆ ಅರ್ಹತೆ ಪಡೆದಿದ್ದಾರೆ. ಈಜುಪಟು ಶ್ರೀಹರಿ ನಟರಾಜ್ ಹಾಗೂ ತರಬೇತುದಾರರು ಹಾಗೂ ಪಾಲಕರನ್ನು ಮುಖ್ಯಮಂತ್ರಿ ಗೌರವಿಸಿದರು. ಇದೇ ವೇಳೆ ಭಾರತ ತಂಡದ ಜೆರ್ಸಿಯನ್ನು ಮುಖ್ಯಮಂತ್ರಿ ಅನಾವರಣಗೊಳಿಸಿದರು. ಬಳಿಕ ಒಲಿಂಪಿಕ್ನಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಸೆಲ್ಫಿ ಪ್ರೇಮ್ನಲ್ಲಿ ನಿಂತು ಸಿಎಂ ಹಾಗೂ ಸಚಿವರು ಶುಭ ಕೋರಿದರು.

ಈ ಸಂದರ್ಭದಲ್ಲಿ ಕರ್ನಾಟಕ ಒಲಿಂಪಿಕ್ ಅಸೋಸಿಯೇಶನ್ ಅಧ್ಯಕ್ಷ ಗೋವಿಂದರಾಜ್, ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕ್ರೀಡಾ ಇಲಾಖೆ ಆಯುಕ್ತ ಡಾ.ಗೋಪಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X