Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಾಲಕನ ಸಾಮರ್ಥ್ಯ ಪರೀಕ್ಷೆ ವೇಳೆ ನಿಯಮ...

ಚಾಲಕನ ಸಾಮರ್ಥ್ಯ ಪರೀಕ್ಷೆ ವೇಳೆ ನಿಯಮ ಉಲ್ಲಂಘನೆ: ಸರಕಾರಕ್ಕೆ ನಿಲುವು ತಿಳಿಸಲು ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ14 July 2021 9:04 PM IST
share
ಚಾಲಕನ ಸಾಮರ್ಥ್ಯ ಪರೀಕ್ಷೆ ವೇಳೆ ನಿಯಮ ಉಲ್ಲಂಘನೆ: ಸರಕಾರಕ್ಕೆ ನಿಲುವು ತಿಳಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು, ಜು.14: ಡ್ರೈವಿಂಗ್ ಲೈಸೆನ್ಸ್ ಕೊಡುವ ಸಂದರ್ಭದಲ್ಲಿ ಚಾಲಕನ ಸಾಮರ್ಥ್ಯ ಪರೀಕ್ಷಿಸುವ ಸಂಬಂಧ ರೂಪಿಸಿರುವ ನಿಯಮಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಸರಿಯಾಗಿ ಪಾಲಿಸುತ್ತಿಲ್ಲ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ತನ್ನ ಪ್ರತಿಕ್ರಿಯೆ ತಿಳಿಸುವಂತೆ ಸೂಚಿಸಿದೆ.

ಡ್ರೈವಿಂಗ್ ಟೆಸ್ಟ್ ವೇಳೆ ಚಾಲಕನನ್ನು ಸರಿಯಾಗಿ ಪರೀಕ್ಷಿಸುತ್ತಿಲ್ಲ ಎಂದು ಆರೋಪಿಸಿ ಬೆಂಗಳೂರಿನ ಕಗ್ಗದಾಸಪುರ ನಿವಾಸಿ ಎಸ್.ಗೌರಿ ಶಂಕರ್ ಎಂಬುವರು ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠ ವಿಚಾರಣೆ ನಡೆಸಿತು. 

ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರು ಗಂಭೀರವಾದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ಕುರಿತು ಸರಕಾರ ತನ್ನ ಪ್ರತಿಕ್ರಿಯೆ ತಿಳಿಸಬೇಕು ಎಂದು ಸೂಚಿಸಿ, ವಿಚಾರಣೆ ಮುಂದೂಡಿತು. ಇದೇ ವೇಳೆ ಸಾರಿಗೆ ಇಲಾಖೆ ಅಧಿಕಾರಿಗಳು ಚಾಲನಾ ಪರವಾನಿಗೆ ನೀಡುವ ವೇಳೆ ಅಭ್ಯರ್ಥಿಗಳನ್ನು ಹೇಗೆ ಪರೀಕ್ಷಿಸುತ್ತಾರೆ ಎಂಬುದನ್ನು ತಿಳಿಯಲು ಏಜೆನ್ಸಿ ನೇಮಿಸುವ ಅಗತ್ಯವಿದೆ ಎಂದು ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತು.
ವಿಚಾರಣೆ ವೇಳೆ ಅರ್ಜಿದಾರರು ವಾದಿಸಿ, ಕೇಂದ್ರ ಮೋಟಾರು ವಾಹನ ನಿಯಮಗಳು-1989ರ ನಿಯಮಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ನಿಯಮ 15 ರಡಿ 25 ಮಾರ್ಗಸೂಚಿಗಳಿದ್ದು, ಅವುಗಳ ಪ್ರಕಾರ ಡಿಎಲ್ ಟೆಸ್ಟ್ ನಡೆಸುವ ವೇಳೆ ಚಾಲಕನ ಸಾಮಥ್ರ್ಯವನ್ನು ಕೂಲಂಕಷವಾಗಿ ಪರೀಕ್ಷಿಸಬೇಕು. ಎಲ್ಲ ಮಾರ್ಗಸೂಚಿಗಳ ಪ್ರಕಾರ ಚಾಲಕನ ಚಾಲನಾ ಸಾಮಥ್ರ್ಯವನ್ನು ಪರೀಕ್ಷಿಸಿದ ನಂತರವೇ ಡಿಎಲ್ ನೀಡುವ ಕುರಿತು ನಿರ್ಣಯಿಸಬೇಕು. ಆದರೆ, ಕೆಲ ಆರ್‍ಟಿಒ ಅಧಿಕಾರಿಗಳು ದಿನಕ್ಕೆ 75 ರಿಂದ 100 ಮಂದಿಯನ್ನು ಪರೀಕ್ಷೆ ಮಾಡಿ ಮುಗಿಸುತ್ತಿದ್ದಾರೆ. ಇದನ್ನು ಗಮನಿಸಿದರೆ, ಅಧಿಕಾರಿಗಳು ನಿಯಮ 15ನ್ನು ನಿರ್ಲಕ್ಷಿಸುತ್ತಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿದರು.

ನಿಯಮ 15 ಚಾಲನಾ ಪರವಾನಿಗೆ ಬಯಸಿ ಅರ್ಜಿ ಸಲ್ಲಿಸುವ ಅಭ್ಯರ್ಥಿಯನ್ನು ಪರೀಕ್ಷಿಸುವ ನಿಯಮಗಳ ಕುರಿತು ಹೇಳುತ್ತದೆ. ಚಾಲಕ ತನ್ನ ವಾಹನವನ್ನು ಹೇಗೆ ಚಲಾಯಿಸುತ್ತಾನೆ ಎಂಬುದರ ಜತೆಗೆ ವಾಹನ ಚಾಲನೆಗೆ ಮುನ್ನ ಮಿರರ್ ಹೊಂದಿಸಿಕೊಳ್ಳುವುದು, ಎಂಜಿನ್ ಸ್ಟಾರ್ಟ್ ಮಾಡುವ ಮುನ್ನ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು, ನಿಧಾನವಾಗಿ ಮತ್ತು ಸುಲಲಿತವಾಗಿ ವಾಹನವನ್ನು ಮುಂದಕ್ಕೆ ಬಿಡುವುದು, ಗೇರ್ ನ್ನು ಸೂಕ್ತ ರೀತಿಯಲ್ಲಿ ಬದಲಾಯಿಸುವುದು, ಟ್ರಾಫಿಕ್ ಸಂದರ್ಭದಲ್ಲಿ, ಇಳಿಜಾರು ಮತ್ತು ದಿಬ್ಬಗಳು ಎದುರಾದ ವೇಳೆ ವಾಹನದ ಮೇಲಿನ ನಿಯಂತ್ರಣ, ಓವರ್ ಟೇಕ್ ಮಾಡುವುದು, ಸಿಗ್ನಲ್ ನೀಡುವುದು ಸೇರಿದಂತೆ ಒಟ್ಟು 25 ವಿಷಯಗಳಲ್ಲಿ ಅಭ್ಯರ್ಥಿಯನ್ನು ಸೂಕ್ಷ್ಮವಾಗಿ ಪರೀಕ್ಷಿಸಬೇಕು ಎಂದು ತಿಳಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X