ಉಡುಪಿ: 3,872 ಮಂದಿಗೆ ಕೋವಿಡ್ ಲಸಿಕೆ

ಉಡುಪಿ, ಜು.14: ಜಿಲ್ಲೆಯಲ್ಲಿ ಬುಧವಾರ 3,872 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 2626 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 1,246 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು 18ರಿಂದ 44 ವರ್ಷದೊಳಗಿನ 1,800 ಮಂದಿ ಮೊದಲ ಡೋಸ್ ಹಾಗೂ 105 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 815 ಮಂದಿ ಮೊದಲ ಡೋಸ್ ಹಾಗೂ 1,137 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. ಏಳು ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ ಎಂಟು ಮಂದಿ ಮುಂಚೂಣಿ ಕಾರ್ಯಕರ್ತರಿಗೂ ಇಂದು ಲಸಿಕೆ ನೀಡಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 4,52,489 ಮಂದಿ ಲಸಿಕೆಯ ಮೊದಲ ಡೋಸ್ ನ್ನು ಪಡೆದರೆ, 1,53,761 ಮಂದಿ ಎರಡನೇ ಡೋಸ್‌ನ್ನು ಪಡೆದು ಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.
Next Story





