Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಸಾವಿನ ಸಂಖ್ಯೆಯನ್ನು...

ಕೋವಿಡ್ ಸಾವಿನ ಸಂಖ್ಯೆಯನ್ನು ವಾಸ್ತವಕ್ಕಿಂತ ಕಡಿಮೆ ತೋರಿಸಲಾಗುತ್ತಿದೆ ಎಂಬ ಮಾಧ್ಯಮ ವರದಿ ಸುಳ್ಳು: ಆರೋಗ್ಯ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ14 July 2021 10:08 PM IST
share
ಕೋವಿಡ್ ಸಾವಿನ ಸಂಖ್ಯೆಯನ್ನು ವಾಸ್ತವಕ್ಕಿಂತ ಕಡಿಮೆ ತೋರಿಸಲಾಗುತ್ತಿದೆ ಎಂಬ ಮಾಧ್ಯಮ ವರದಿ ಸುಳ್ಳು: ಆರೋಗ್ಯ ಸಚಿವಾಲಯ

ಹೊಸದಿಲ್ಲಿ, ಜು. 14: ಭಾರತದಲ್ಲಿ ಕೋವಿಡ್ ಸಾವಿನ ಸಂಖ್ಯೆಯನ್ನು ವಾಸ್ತವಕ್ಕಿಂತ ಕಡಿಮೆ ತೋರಿಸಲಾಗುತ್ತಿದೆ ಎಂಬ ಮಾಧ್ಯಮ ವರದಿ ಕಪೋಲ ಕಲ್ಪಿತ. ಇದಕ್ಕೆ ಯಾವುದೇ ರೀತಿಯ ಆಧಾರ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಹೇಳಿದೆ. ರಾಷ್ಟ್ರೀಯ ಆರೋಗ್ಯ ಮಿಷನ್ನ ಆರೋಗ್ಯ ನಿರ್ವಹಣೆ ಮಾಹಿತಿ ವ್ಯವಸ್ಥೆ (ಎಚ್ಎಂಐಎಸ್) ಆಧಾರದ ವರದಿಯನ್ನು ನಾಗರಿಕ ನೋಂದಣಿ ವ್ಯವಸ್ಥೆ (ಸಿಆರ್ಎಸ್)ಯೊಂದಿಗೆ ಹೋಲಿಕೆ ಮಾಡಿದಾಗ ದೋಷಗಳು ಗಮನ ಸೆಳೆಯಿತು ಎಂದು ಹೇಳಿಕೆಯಲ್ಲಿ ಆರೋಗ್ಯ ಸಚಿವಾಲಯ ತಿಳಿಸಿದೆ. 

ರಾಷ್ಟ್ರೀಯ ಆರೋಗ್ಯ ಮಿಷನ್ನ ಆರೋಗ್ಯ ನಿರ್ವಹಣಾ ಮಾಹಿತಿ ವ್ಯವಸ್ಥೆ (ಎಚ್ಎಂಐಎಸ್)ಯಲ್ಲಿ ವರದಿಯಾದ ಸಾವಿನ ಸಂಖ್ಯೆಯನ್ನು ಮಾಧ್ಯಮ ವರದಿ ಉಲ್ಲೇಖಿಸಿದೆ ಹಾಗೂ ಇತರ ಮಾಹಿತಿಗಳು ಸಿಗದೇ ಇರುವುದರಿಂದ ಈ ಸಾವುಗಳನ್ನು ಕೋವಿಡ್ ಸಾವುಗಳೆಂದು ಪರಿಗಣಿಸಬೇಕು ಎಂದು ಹೇಳಿದೆ. 2,50,000ಕ್ಕೂ ಅಧಿಕ ಸಾವುಗಳ ಕಾರಣ ತಿಳಿದು ಬಂದಿಲ್ಲ ಎಂದು ವರದಿ ಹೇಳಿದೆ.

ಯಾವುದೇ ಆಧಾರವಿಲ್ಲದೆ ದೊರಕಿದ ದತ್ತಾಂಶದ ಆಧಾರದ ಮೂಲಕ ಯಾವುದೇ ಸಾವನ್ನು ಕೋವಿಡ್ನಿಂದ ಸಂಭವಿಸಿದ ಸಾವು ಎಂದು ಹೇಳುವುದು ತಪ್ಪು ಹಾಗೂ ಇಂತಹ ಅನುಮಾನಗಳು ಕೇವಲ ಕಲ್ಪನೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಕೋವಿಡ್ ದತ್ತಾಂಶ ನಿರ್ವಹಣೆಗೆ ಸಂಬಂಧಿಸಿದ ವಿಧಾನದಲ್ಲಿ ಕೇಂದ್ರ ಸರಕಾರದ ಪಾರದರ್ಶಕತ್ವವನ್ನು ಸಚಿವಾಲಯ ಒತ್ತಿ ಹೇಳಿದೆ. 

ಅಲ್ಲದೆ, ಎಲ್ಲ ಕೋವಿಡ್ ಸಂಬಂಧಿತ ಸಾವುಗಳನ್ನು ದಾಖಲಿಸುವಲ್ಲಿ ಅತ್ಯುತ್ತಮ ವ್ಯವಸ್ಥೆ ಇದೆ ಎಂದು ಅದು ಹೇಳಿದೆ. ಈ ನಿರ್ದಿಷ್ಟ ವ್ಯವಸ್ಥೆಯಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ದತ್ತಾಂಶವನ್ನು ನಿರಂತರವಾಗಿ ಪರಿಷ್ಕೃತಗೊಳಿಸುತ್ತಿವೆ. ಅಸಂಗತತೆ ತಪ್ಪಿಸಲು ಭಾರತದಲ್ಲಿ ಕೋವಿಡ್ ಸಂಬಂಧಿತ ಸಾವನ್ನು ಸೂಕ್ತವಾಗಿ ದಾಖಲಿಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾರ್ಗಸೂಚಿ ಕೂಡ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X