ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಂಜುಂ ಪರ್ವೇಝ್ ನೇಮಕ
ಇಬ್ಬರು ಐಎಎಸ್ ಅಧಿಕಾರಿಗಳು ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

ಅಂಜುಂ ಪರ್ವೇಝ್
ಬೆಂಗಳೂರು, ಜು.14: ರಾಜ್ಯ ಸರಕಾರವು ಇಬ್ಬರು ಐಎಎಸ್, ನಾಲ್ವರು ಐಎಫ್ಎಸ್ ಹಾಗೂ ಇಬ್ಬರು ಎಸ್ಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಐಎಎಸ್: ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಅಂಜುಂ ಪರ್ವೇಝ್ ಅವರನ್ನು ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಜೇಂದ್ರ ಕುಮಾರ್ ಕಟಾರಿಯಾ ಅವರನ್ನು ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಐಎಫ್ಎಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ-ಡಾ.ಮಾಲತಿ ಪ್ರಿಯಾ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ-ಡಾ.ಪಿ.ರಮೇಶ್ ಕುಮಾರ್, ಬೆಂಗಳೂರಿನ ಕಾಡುಗೋಡಿಯಲ್ಲಿರುವ ಎಫ್ಟಿಎಟಿಐಯ ಉಪ ಅರಣ್ಯ ಸಂರಕ್ಷಣಾಧಿಕಾರಿ- ಡಾ.ಕರಿಕಾಲನ್ ವಿ. ಹಾಗೂ ಬೆಂಗಳೂರು ಕೇಂದ್ರ ಕಚೇರಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೂರ್ಯ ಸೇನ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಎಸ್ಎಫ್ಎಸ್: ಚಿಕ್ಕಮಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಎನ್.ಇ.ಕ್ರಾಂತಿ ಹಾಗೂ ಹಾವೇರಿ ವಿಭಾಗದ ಉಪ ಸಂರಕ್ಷಣಾಧಿಕಾರಿಯಾಗಿ ಎಸ್.ಬಾಲಕೃಷ್ಣ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.







