ಬಕ್ರೀದ್ ಕುರ್ಬಾನಿಗೆ ರಕ್ಷಣೆ ನೀಡಲು ಮುಸ್ಲಿಂ ಸೆಂಟ್ರಲ್ ಕಮಿಟಿ ಮನವಿ

ಮಂಗಳೂರು, ಜು.14: ಜು.21ರಂದು ಬಕ್ರೀದ್ ಹಾಗೂ ನಂತರದ ಮೂರು ದಿನಗಳಲ್ಲಿ ನಡೆಯುವ ಕುರ್ಬಾನಿ ಪ್ರಕ್ರಿಯೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಸೂಕ್ತ ರಕ್ಷಣೆ ನೀಡುವಂತೆ ದ.ಕ. ಜಿಲ್ಲಾಧಿಕಾರಿ, ಮಂಗಳೂರು ನಗರ ಪೊಲೀಸ್ ಆಯುಕ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಬುಧವಾರ ಮನವಿ ಸಲ್ಲಿಸಲಾಯಿತು.
ಮನವಿಗೆ ಪೂರಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಕಾನೂನಿನ ಚೌಕಟ್ಟಿನೊಳಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಅಲ್‌ಹಾಜ್ ಇಬ್ರಾಹಿಂ ಕೋಡಿಜಾಲ್, ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್, ಸಿ.ಎಂ. ಮುಸ್ತಫ, ಹಾಜಿ ಮುಹಮ್ಮದ್ ಬಪ್ಪಳಿಗೆ, ಸಿ.ಎಂ. ಹನೀಫ್, ಪಿ.ಪಿ. ಮಜೀದ್, ಅಹ್ಮದ್ ಬಾವ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.
Next Story





