Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಾಣಿ ಹಿಂಸೆಗೆ ಕಠಿಣ ಕ್ರಮ : ದ.ಕ....

ಪ್ರಾಣಿ ಹಿಂಸೆಗೆ ಕಠಿಣ ಕ್ರಮ : ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಪ್ರಾಣಿ ದಯಾ ಸಂಘದ ಸಭೆ

ವಾರ್ತಾಭಾರತಿವಾರ್ತಾಭಾರತಿ14 July 2021 10:43 PM IST
share
ಪ್ರಾಣಿ ಹಿಂಸೆಗೆ ಕಠಿಣ ಕ್ರಮ : ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು, ಜು.14: ಕೋವಿಡ್ ಸೋಂಕು ಅಥವಾ ಇನ್ನಿತರ ಯಾವುದೇ ಕಾರಣಗಳಿಂದಾಗಿ ಸಾಕು ಪ್ರಾಣಿ ಹಾಗೂ ಪಕ್ಷಿಗಳ ಪೋಷಣೆ- ರಕ್ಷಣೆ ನಿಲ್ಲಬಾರದು. ಅವುಗಳ ಪೋಷಣೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ಜಿಲ್ಲಾಡಳಿತ ನೀಡಲಿದೆ. ಪ್ರಾಣಿಗಳಿಗೆ ಹಿಂಸೆ ನೀಡಿರುವುದು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಪ್ರಾಣಿಗಳು ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದಿರುವುದು ಕಂಡುಬರುತ್ತಿದ್ದು, ಅಂತಹ ಪ್ರಾಣಿಗಳ ರಕ್ಷಣೆ ಹಾಗೂ ಪೋಷಣೆಗೆ ಪ್ರಾಣಿ ದಯಾ ಸಂಘವು ಕಾರ್ಯನಿರ್ವಹಿಸುವುದರೊಂದಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಪ್ರಾಣಿ ಹಿಂಸೆಗಳ ದುಷ್ಟರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.

ಪ್ರಾಣಿಗಳನ್ನು ಮಾರಾಟ ಮಾಡುವುದು ಅಥವಾ ಕೊಲ್ಲುವುದು ಕಂಡುಬಂದಲ್ಲಿ ಪ್ರಾಣಿ ದಯಾ ಸಂಘದ ಸದಸ್ಯರು ಪ್ರಕರಣ ದಾಖಲಿಸಬೇಕು. ಗೋಶಾಲೆ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳು ಕಾಳಜಿ ವಹಿಸಬೇಕು. ಜಿಲ್ಲೆಯಲ್ಲಿ ಪ್ರತೀ ಗ್ರಾಮದಲ್ಲಿ ಗೋಮಾಳ ನಿರ್ಮಿಸಿ ಅದರ ನಿರ್ವಹಣೆಯನ್ನು ಸ್ಥಳೀಯ ದೇವಸ್ಥಾನಗಳಿಗೆ ನೀಡಬೇಕು. ಅದಕ್ಕೆ ಸಂಬಂಧಿಸಿದ ಖರ್ಚು-ವೆಚ್ಚವನ್ನು ಜಿಲ್ಲಾಡಳಿತ ಭರಿಸಲು ಕ್ರಮ ಕೈಗೊಳ್ಳಲಾ ಗುವುದು ಎಂದು ತಿಳಿಸಿದರು.

ಸಮರ್ಪಕ ಕಸ ವಿಂಗಡಣೆಯಾಗದ ಕಾರಣ ಗಾಜು, ಪ್ಲಾಸ್ಟಿಕ್, ಮೂಳೆ ಇನ್ನಿತರ ಅಪಾಯಕಾರಿ ವಸ್ತುಗಳನ್ನು ಪ್ರಾಣಿಗಳು ಸೇವಿಸಿ ಸಾವಿಗೀಡಾಗುತ್ತಿವೆ. ತ್ಯಾಜ್ಯ ವಿಂಗಡಣೆಗೆ ಸರಿಯಾದ ಕ್ರಮ ಆಗಬೇಕು. ಪ್ರತೀ ಪಂಚಾಯತ್ ವ್ಯಾಪ್ತಿಯಲ್ಲೂ ಸೂಕ್ತವಾಗಿ ಕಸ ವಿಲೇವಾರಿ ಮಾಡುವ ವ್ಯವಸ್ಥೆ ಆಗಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ನಗರದ ಉಪ ಪೊಲೀಸ್ ಆಯುಕ್ತ ಹರಿರಾಮ್ ಶಂಕರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು, ಪ್ರಾಣಿದಯಾ ಸಂಘದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಪೆಟ್‌ಶಾಪ್ ನೋಂದಣಿ ಕಡ್ಡಾಯ: ಡಿಸಿ 

ಮಂಗಳೂರು ನಗರದ ಫುಟ್‌ಪಾತ್‌ಗಳಲ್ಲಿರುವ ಪೆಟ್ ಶಾಪ್‌ಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ, ಅವುಗಳು ನೋಂದಣಿಯಾಗಿರುವ ಬಗ್ಗೆ ಮಾಹಿತಿ ಪಡೆಯಬೇಕು. ನೋಂದಣಿ ಆಗದ ಪೆಟ್ ಶಾಪ್‌ಗಳ ವಿರುದ್ಧ ಕಾನುನು ಬದ್ಧ ಕ್ರಮ ಕೈಗೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X