ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ: ನಳಿಲ್ ಕುಮಾರ್ ಕಟೀಲು

ಚಾಮರಾಜನಗರ, ಜು.14: ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದಲ್ಲಿ ನಾಯಕತ್ವದ ಬದಲಾವರಣೆ ಇಲ್ಲ, ನಾಯಕತ್ವ ಬದಲಾವಣೆ ವಿಚಾರ ಇದೀಗ ಮುಗಿದ ಅಧ್ಯಾಯವಾಗಿದೆ . ಇನ್ನೂ ಎರಡು ವರ್ಷಗಳ ಕಾಲ ಬಿ.ಎಸ್. ಯಡಿಯೂರಪ್ಪರವರೇ ರಾಜ್ಯದ ಮುಖ್ಯಮಂತ್ರಿಗಳಾಗಿರುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿಲ್ ಕುಮಾರ್ ಕಟೀಲ್ ಚಾಮರಾಜನಗರದಲ್ಲಿ ಹೇಳಿದರು.
ಚಾಮರಾಜನಗರದ ಸೇವಾ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಬಿಜೆಪಿ ಆಯೋಜಿಸಿದ್ದ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಶವಸಂಸ್ಕಾರ ಮಾಡಿದ ತಂಡದವರಿಗೆ ಅಭಿನಂಧಿಸುವ ಕಾರ್ಯಕ್ರಮಕ್ಕೆ ಭಾಗವಹಿಸುವ ಮುನ್ನಾ ಮಾಧ್ಯಮದವರೊಂದಿಗೆ ಮಾತನಾಡಿ, ನಾಯಕತ್ವ ಬದಲಾವಣೆ ವಿಚಾರದಲ್ಲಿ ಕೇಂದ್ರದ ಹೈ ಕಮಾಂಡ್ ಸ್ಪಷ್ಟ ನಿಲುವನ್ನು ಪ್ರಕಟಿಸಿದೆ, ಈ ಹಿನ್ನಲೆಯಲ್ಲಿ ನಾಯಕತ್ವದ ಬದಲಾವಣೆ ವಿಚಾರ ಅಪ್ರಸ್ತತ ಎಂದರು.
ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದಲ್ಲಿ ಮೃತರಾದ 36 ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಸಾಂತ್ವಾನ ಹೇಳಲು ಯಾರೂ ಬರಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ನಳಿಲ್ ಕುಮಾರ್ ಕಟೀಲ್ ,ಪ್ರಸ್ತುತ ಕೋವಿಡ್ ಸೋಂಕು ಹರಡುವ ಹಿನ್ನಲೆಯಲ್ಲಿ ಸಾಂತ್ವಾನ ಹೇಳಲು ಆಗಲಿಲ್ಲಎಂದು ಜಾಣ್ಮೆಯಿಂದ ನುಣಚಿಕೊಂಡರು.
ಪದೇ ಪದೇ ಮುಖ್ಯಮಂತ್ರಿ ಮತ್ತು ಅವರ ಪುತ್ರರ ವಿರುದ್ದ ಆರೋಪ ಮಾಡುವ ಬಸವನಗೌಡ ಪಾಟೀಲ್ ಯತ್ನಾಳ್ ಮೇಲೆ ಕ್ರಮ ಕೈಗೊಳ್ಳುವುದಿಲ್ಲವೇ ಎನ್ನು ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಸಿದರು.
ಈ ಸಂದರ್ಭದಲ್ಲಿ ಗುಂಡ್ಲುಪೇಟೆ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಹಾಜರಿದ್ದರು.







