ರಾಷ್ಟ್ರಪತಿ ಚುನಾವಣೆಗೆ ನಾನು ಅಭ್ಯರ್ಥಿಯಲ್ಲ: ಶರದ್ ಪವಾರ್

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು 2022 ರಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ತಳ್ಳಿಹಾಕಿದ್ದಾರೆ ಎಂದು ಅವರ ಪಕ್ಷದ ಮೂಲಗಳು ಬುಧವಾರ ತಿಳಿಸಿವೆ.
ಹಿರಿಯ ರಾಜಕಾರಣಿ ಪವಾರ್ ರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗುತ್ತಾರೆ ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಈ ಹೇಳಿಕೆ ಬಂದಿದೆ.
ಮಹಾರಾಷ್ಟ್ರದ ಮಾಜಿ ಸಿಎಂ ಹಾಗು ಮಾಜಿ ಕೇಂದ್ರ ಸಚಿವರಾಗಿರುವ ಪವಾರ್ (80) ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿಯಾಗುತ್ತಾರೆ ಎಂಬ ಮಾಧ್ಯಮ ವರದಿಗಳನ್ನು ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story





