ಉಡುಪಿ: ಸರ್ಕಾರಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ
![ಉಡುಪಿ: ಸರ್ಕಾರಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ ಉಡುಪಿ: ಸರ್ಕಾರಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ](https://www.varthabharati.in/sites/default/files/images/articles/2021/07/15/298937-1626333051.jpg)
ಉಡುಪಿ: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಅಧಿಕಾರಿ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಅಧಿಕಾರಿ ಕೃಷ್ಣ ಎಸ್ ಹೆಬ್ಸೂರು ಮನೆ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ದಾಖಲೆ ಹಾಗೂ ಆಸ್ತಿ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಉಡುಪಿಯ ದೊಡ್ಡಣಗುಡ್ಡೆಯಲ್ಲಿ ಕೃಷ್ಣ. ಎಸ್ ಹೆಬ್ಸೂರು ಮನೆ ಇದ್ದು, ಎಸಿಬಿ ಅಧಿಕಾರಿಗಳು ಸದ್ಯ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
Next Story