ದ.ಕ. ಜಿಲ್ಲೆ : ಕೋವಿಡ್‌ಗೆ ಏಳು ಬಲಿ; 224 ಮಂದಿಗೆ ಕೊರೋನ ಸೋಂಕು

ಮಂಗಳೂರು, ಜು.15: ದ.ಕ. ಜಿಲ್ಲೆಯಲ್ಲಿ ಗುರುವಾರ 224 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 7 ಮಂದಿ ಸಾವಿಗೀಡಾಗಿದ್ದಾರೆ. 190 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯ ಪಾಸಿಟಿವಿಟಿ ದರ ಶೇ.3.05ರಷ್ಟಿದೆ.
ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 96,215ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 92,908 ಮಂದಿ ಗುಣಮುಖರಾಗಿದ್ದರೆ, 1347 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 1960 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಟ್ಟು 80,656 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 98,32,667 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
10 ಲಕ್ಷ ದಾಟಿದ ಲಸಿಕೆ: ಕೊರೋನ ಲಸಿಕೆಯಲ್ಲಿ ದ.ಕ. ಜಿಲ್ಲೆ ಗುರುವಾರ 10 ಲಕ್ಷ ಡೋಸ್‌ಗಳನ್ನು ದಾಟಿದೆ. ಇದುವರೆಗೆ ಒಟ್ಟು 10,01,608 ಡೋಸ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
Next Story





