Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಲಾ-ಕಾಲೇಜು ವ್ಯಾಪ್ತಿ ತಂಬಾಕು...

ಶಾಲಾ-ಕಾಲೇಜು ವ್ಯಾಪ್ತಿ ತಂಬಾಕು ಮುಕ್ತವೆಂದು ಘೋಷಣೆಗೆ ಕ್ರಮ ವಹಿಸಲು ಡಿಸಿ ಡಾ. ರಾಜೇಂದ ಸೂಚನೆ

ವಾರ್ತಾಭಾರತಿವಾರ್ತಾಭಾರತಿ15 July 2021 10:19 PM IST
share
ಶಾಲಾ-ಕಾಲೇಜು ವ್ಯಾಪ್ತಿ ತಂಬಾಕು ಮುಕ್ತವೆಂದು ಘೋಷಣೆಗೆ ಕ್ರಮ ವಹಿಸಲು ಡಿಸಿ ಡಾ. ರಾಜೇಂದ ಸೂಚನೆ

ಮಂಗಳೂರು, ಜು.15: ದ.ಕ. ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ಪ್ರದೇಶವೆಂದು ಘೋಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ ಕೆ.ವಿ. ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಜಿಲ್ಲೆಯ 2,089 ಶಾಲೆಗಳಲ್ಲಿ 1,822 ಶಾಲೆಗಳನ್ನು ತಂಬಾಕು ಮುಕ್ತವೆಂದು ಘೋಷಿಸಿ ದ್ದಾರೆ. ಉಳಿದ 267 ಶಾಲೆಗಳು ಹಾಗೂ 142 ಪದವಿ ಕಾಲೇಜುಗಳು ಹಾಗೂ 210 ಪದವಿ ಪೂರ್ವ ಕಾಲೇಜುಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿ ಘೋಷಿಸುವ ಅಗತ್ಯವಿದೆ. ಈ ದಿಸೆಯಲ್ಲಿ ಆಯಾ ಶಾಲಾ ಕಾಲೇಜುಗಳ ಆವರಣದಲ್ಲಿ 100 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವುದು ಕಂಡು ಬಂದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ಸಂದೇಶ ಅಳವಡಿಸಬೇಕು. ಪರಿಸರದಲ್ಲಿ ಜಾಗೃತಿ ಮೂಡಿಸಬೇಕು. ಮುಖ್ಯವಾಗಿ ಶಾಲಾ -ಕಾಲೇಜುಗಳ ವ್ಯಾಪ್ತಿಯ 100 ಮೀಟರ್ ವ್ಯಾಪ್ತಿ ಯಲ್ಲಿ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದವರು ಹೇಳಿದರು.

ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರರು ಈ ಬಗ್ಗೆ ತಾಲೂಕು ಮಟ್ಟದ ಕಾರ್ಯಪಡೆ ಸಮಿತಿ ಸಭೆಯಲ್ಲಿ ಚರ್ಚಿಸಿ ಉಪಯುಕ್ತ ಕ್ರಮ ಕೈಗೊಂಡು ಶಾಲಾ-ಕಾಲೇಜು ವಲಯವನ್ನು ತಂಬಾಕು ಮುಕ್ತ ಮಾಡಬೇಕು. ಮಕ್ಕಳು ದುಷ್ಚಟಕ್ಕೆ ಬಲಿಯಾಗಲು ಯಾವುದೇ ಕಾರಣಕ್ಕೂ ಅವ ಕಾಶ ಮಾಡಿಕೊಡಬಾರದು. ಸಂಬಂಧಿಸಿದ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದರು.

ಜಿಲ್ಲಾ, ಉಪ-ವಿಭಾಗ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿರುವ ಸರಕಾರಿ ಕಚೇರಿಗಳಲ್ಲಿಯೂ ತಂಬಾಕು ಉಪಯೋಗ ಅಥವಾ ಸೇವನೆಗೆ ಅವಕಾಶವಿಲ್ಲ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಎಚ್ಚರ ವಹಿಸಬೇಕು. ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಗಳವರು ಮಕ್ಕಳಿಗೆ ತಂಬಾಕು ಪದಾರ್ಥಗಳನ್ನು ನೀಡಬಾರದು. ಇಂತಹ ಅಂಗಡಿಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಬೇಕು. ಒಂದು ವೇಳೆ ಮಕ್ಕಳಿಗೆ ತಂಬಾಕು ಪದಾರ್ಥ ವಿತರಿಸಿದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ನಿರ್ದೇಶನ ನೀಡಿದರು.

ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಎಲ್ಲ ಇಲಾಖೆಗಳ ಸಹಭಾಗಿತ್ವ ಅಗತ್ಯ, ಪೊಲೀಸ್ ಇಲಾಖೆಯು ಸೆಕ್ಷನ್ 4, 5, 6 ಹಾಗೂ 7ರಡಿ ಸಹ ಪ್ರಕರಣ ದಾಖಲಿಸಬಹುದು ಎಂದರು.

ಸಭೆಯಲ್ಲಿ ಜಿಪಂ ಸಿಇಒ ಡಾ.ಕುಮಾರ್, ಡಿಸಿಪಿ ಬಿ.ಪಿ. ದಿನೇಶ್ ಕುಮಾರ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಡಾ. ಹನು ಮಂತರಾಯಪ್ಪ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲೆಯ ತಾಲೂಕು ಮಟ್ಟದ ಅಧಿಕಾರಿಗಳು ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X