ಸೋನಿಯಾ ಗಾಂಧಿಯವರನ್ನು ಭೇಟಿಯಾದ ನವಜೋತ್ ಸಿಂಗ್ ಸಿಧು

ಹೊಸದಿಲ್ಲಿ: ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಹೊಸದಿಲ್ಲಿಯ 10 ಜನಪಥ್ ನಿವಾಸದಲ್ಲಿ ಶುಕ್ರವಾರ ಭೇಟಿಯಾದರು.
ಕಾಂಗ್ರೆಸ್ ಪಂಜಾಬ್ ಉಸ್ತುವಾರಿ ಹರೀಶ್ ರಾವತ್ ಕೂಡ ಸಭೆಗಾಗಿ ಸೋನಿಯಾ ಅವರ ನಿವಾಸಕ್ಕೆ ಆಗಮಿಸಿದರು.
ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಸಿಎಂ ಅಮರಿಂದರ್ ಮತ್ತು ಸಿಧು ನಡುವೆ ಇರುವ ಭಿನ್ನಾಭಿಪ್ರಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಪಕ್ಷ ಪ್ರಯತ್ನಿಸುತ್ತಿದೆ.
ಸಿಧು ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಬಹುದು. ಸಿಧು ಹಾಗೂ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಒಟ್ಟಿಗೆ ಕೆಲಸ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಶಾಂತಿ ಸೂತ್ರವನ್ನು ರೂಪಿಸಲಾಗಿದೆ ಎಂದು ಹರೀಶ್ ರಾವತ್ ಗುರುವಾರ ಹೇಳಿದ್ದಾರೆ.
Next Story





