ಉಡುಪಿ: 105 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಜು.16: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 105 ಮಂದಿ ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 147 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 902 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು ಕೋವಿಡ್-19 ಸೋಂಕಿಗೆ ಜಿಲ್ಲೆಯಲ್ಲಿ ಯಾರೂ ಬಲಿಯಾಗಿಲ್ಲ. ದಿನದಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟ 105 ಮಂದಿಯಲ್ಲಿ 45 ಮಂದಿ ಪುರುಷರು ಹಾಗೂ 60 ಮಂದಿ ಮಹಿಳೆಯರು. ಉಡುಪಿ ತಾಲೂಕಿನ 67, ಕುಂದಾಪುರ ತಾಲೂಕಿನ 18, ಕಾರ್ಕಳ ತಾಲೂಕಿನ 20 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 14 ಮಂದಿ ಕೋವಿಡ್ ಆಸ್ಪತ್ರೆ ಹಾಗೂ ಉಳಿದ 91 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಗುರುವಾರ 147 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 66,799ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3183 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 68,104ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 7,29,017 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.
ಇಬ್ಬರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ: ಹೊರಜಿಲ್ಲೆಯ ಇಬ್ಬರಲ್ಲಿ ಇಂದು ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಸದ್ಯ ಜಿಲ್ಲೆಯಲ್ಲಿ ಒಂಭತ್ತು ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.
4282 ಮಂದಿಗೆ ಕೋವಿಡ್ ಲಸಿಕೆ
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 4,282 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 2222 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿ ದರೆ, 2,060 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು 18ರಿಂದ 44 ವರ್ಷದೊಳಗಿನ 1,303 ಮಂದಿ ಮೊದಲ ಡೋಸ್ ಹಾಗೂ 78 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 899 ಮಂದಿ ಮೊದಲ ಡೋಸ್ ಹಾಗೂ 1,978 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. ನಾಲ್ವರು ಆರೋಗ್ಯ ಕಾರ್ಯಕರ್ತರು ಹಾಗೂ 20 ಮಂದಿ ಮುಂಚೂಣಿ ಕಾರ್ಯಕರ್ತರಿಗೂ ಇಂದು ಲಸಿಕೆ ನೀಡಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 4,58,381ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 1,58,125 ಮಂದಿ ಎರಡನೇ ಡೋಸ್‌ನ್ನು ಪಡೆದು ಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.







