Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ನಿರ್ವಹಣೆಗಾಗಿ ಎಲ್ಲ...

ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ: ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ16 July 2021 7:32 PM IST
share
ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಜು.16: ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ನಿರ್ವಹಣೆ ಸಂಬಂಧ ನಗರದ ಖಾಸಗಿ ಹೊಟೇಲ್‍ನಲ್ಲಿ ವೈದ್ಯರಿಗಾಗಿ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

18 ವರ್ಷ ಮೇಲಿನವರೆಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇದಕ್ಕಿಂತ ಕೆಳ ವಯಸ್ಸಿನ ಮಕ್ಕಳಿಗೆ ಸೋಂಕು ತಗುಲಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಮಧ್ಯಮ, ಹಿರಿಯ ವಯಸ್ಸಿನವರಿಗೆ ನೀಡುವ ಚಿಕಿತ್ಸೆಯನ್ನು ಮಕ್ಕಳಿಗೆ ನೀಡಲು ಸಾಧ್ಯವಿಲ್ಲ. ಈ ವಯೋಮಾನದವರಿಗೆ ಸೋಂಕು ಬಂದರೆ ಮಕ್ಕಳ ತಜ್ಞರ ಬಳಿಯೇ ಹೋಗಬೇಕೆಂದು ಸೂಚಿಸಲಾಗಿದೆ. ಇದಕ್ಕೆ ಪೂರಕವಾಗಿ ವೈದ್ಯರಿಗೆ ತರಬೇತಿ ನೀಡಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವೈದ್ಯರಿಗೆ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದರು.
ತರಬೇತಿಯನ್ನು ವಿಷಯ ತಜ್ಞರು ನೀಡುತ್ತಿದ್ದು, ಇದನ್ನು ದಾಖಲೆಯಾಗಿಸಿದರೆ ಅನುಕೂಲವಾಗುತ್ತದೆ. ಆದುದರಿಂದ, ಇಲ್ಲಿ ನೀಡುವ ತರಬೇತಿಯನ್ನು ವೀಡಿಯೋ ರೆಕಾರ್ಡ್ ಮಾಡಿಸಿ ದಾಖಲಿಸಬೇಕು. ಇತರೆ ವೈದ್ಯರಿಗೂ ಈ ವಿಷಯ ತಿಳಿಸಬೇಕು ಎಂದು ಸುಧಾಕರ್ ಸೂಚಿಸಿದರು.

ಡಾ.ದೇವಿಶೆಟ್ಟಿ ಸಮಿತಿ ಮೂರನೇ ಅಲೆ ಸಿದ್ಧತೆಗೆ ವರದಿ ನೀಡಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೊರೋನ ವೈರಾಣು ರೂಪಾಂತರಗೊಳ್ಳುತ್ತಿದ್ದು, ಮುಂದುವರಿದ ದೇಶಗಳು ಕೂಡ ಎಡವಿದೆ. ಮೊದಲ ಅಲೆಯಲ್ಲಿ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಪರಿಣಾಮಕಾರಿಯಾಗಿ ನಿಯಂತ್ರಣ ಮಾಡಿದ್ದೇವೆ. ಎರಡನೇ ಅಲೆಗೆ ಮುನ್ನ ಮೂಲಸೌಕರ್ಯ ಹೆಚ್ಚಿಸಲಾಗಿದೆ. 4 ಸಾವಿರ ವೈದ್ಯರನ್ನು ನೇಮಿಸಲಾಗಿದೆ ಎಂದು ಅವರು ವಿವರಿಸಿದರು.

ಕೇರಳ, ಮಹಾರಾಷ್ಟ್ರ ಗಡಿ ಹಂಚಿಕೊಳ್ಳುವುದರಿಂದ ಕೋವಿಡ್ ಬಗ್ಗೆ ಎಚ್ಚರವಾಗಿರಬೇಕು. ಸೋಂಕು ಇನ್ನೂ ಇರುವುದರಿಂದ ಸುರಕ್ಷತಾ ಕ್ರಮ ವಹಿಸಬೇಕು. ಬೆಂಗಳೂರು ನಗರ ಜಿಲ್ಲೆ ಕೋವಿಡ್ ಲಸಿಕಾಕರಣದಲ್ಲಿ ಮುಂಚೂಣಿಯಲ್ಲಿದೆ. ಇದಕ್ಕಾಗಿ ಎಲ್ಲ ಸಿಬ್ಬಂದಿಗೆ ಧನ್ಯವಾದ ಎಂದು ಸುಧಾಕರ್ ಹೇಳಿದರು.

ಮಕ್ಕಳಿಗೆ ಚಿಕಿತ್ಸೆ: ಪ್ರತಿ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಆರೈಕೆಗಾಗಿ ವಿಶೇಷ ವಿಭಾಗ ಆರಂಭಿಸಲಾಗುತ್ತಿದೆ. ಅದಕ್ಕೆ ಬೇಕಾದ ಮಾನವ ಸಂಪನ್ಮೂಲವನ್ನು ಒದಗಿಸಲಾಗಿದೆ. ಹಲವು ದೇಶಗಳಲ್ಲಿ ಮೂರನೇ ಅಲೆ ಬಂದಿದೆ. ಮೈಮರೆತರೆ ಮೂರನೇ ಅಲೆ ನಾವೇ ಉಂಟುಮಾಡಿದಂತಾಗುತ್ತದೆ. ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿದರೆ ಸೋಂಕು ಹರಡುವುದನ್ನು ತಪ್ಪಿಸಬಹುದು. ಕನಿಷ್ಠ ಶೇ.70ರಷ್ಟು ಜನಸಂಖ್ಯೆಗೆ ಲಸಿಕೆ ನೀಡುವವರೆಗೂ ಎಚ್ಚರ ಅಗತ್ಯ ಎಂದು ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದು, ನಮ್ಮ ಮುಖ್ಯಮಂತ್ರಿ ದಿನಕ್ಕೆ 5 ಲಕ್ಷ ಲಸಿಕೆಗೆ ಬೇಡಿಕೆ ಇಟ್ಟಿದ್ದಾರೆ. ಒಂದು ತಿಂಗಳಲ್ಲಿ ಒಂದೂವರೆ ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಇದೆ. ಈಗಾಗಲೇ 2.40 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಿದ್ದೇವೆ ಎಂದು ಸಿಎಂ ಮನವಿ ಮಾಡಿದ್ದಾರೆ. ಈ ತಿಂಗಳಲ್ಲೇ ಹೆಚ್ಚು ಲಸಿಕೆ ಸಿಗುವ ನಿರೀಕ್ಷೆ ಇದೆ ಎಂದು ಸುಧಾಕರ್ ಹೇಳಿದರು.

ಹೆಚ್ಚು ಎಚ್ಚರಿಕೆಯಿಂದಿರಬೇಕೆಂದು ಪ್ರಧಾನಿ ಕಿವಿಮಾತು ಹೇಳಿದ್ದಾರೆ. ಲಸಿಕೆ ಹೆಚ್ಚು ನೀಡಲು ಹಾಗೂ ಕಂಟೇನ್‍ಮೆಂಟ್ ನಿಯಮ ಪಾಲಿಸಲು ಸೂಚಿಸಿದ್ದಾರೆ. ಈಗಾಗಲೇ ಮೂಲಸೌಕರ್ಯ ಹೆಚ್ಚಳಕ್ಕೆ 23 ಸಾವಿರ ಕೋಟಿ ರೂ. ಅನ್ನು ಕೇಂದ್ರ ನೀಡಿದೆ. ಇದನ್ನು ಗ್ರಾಮೀಣ ಆರೋಗ್ಯ ಮೂಲಸೌಕರ್ಯ ಹೆಚ್ಚಿಸಲು ಬಳಸಲು ಸಲಹೆ ನೀಡಲಾಗಿದೆ ಎಂದು ಅವರು ಹೇಳಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X