Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇಂದ್ರದಲ್ಲಿ ಬಾಕಿ ಉಳಿದ ಉಡುಪಿ ಜಿಲ್ಲೆಯ...

ಕೇಂದ್ರದಲ್ಲಿ ಬಾಕಿ ಉಳಿದ ಉಡುಪಿ ಜಿಲ್ಲೆಯ ಯೋಜನೆಗಳು ಶೀಘ್ರ ಪೂರ್ಣ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ16 July 2021 8:25 PM IST
share
ಕೇಂದ್ರದಲ್ಲಿ ಬಾಕಿ ಉಳಿದ ಉಡುಪಿ ಜಿಲ್ಲೆಯ ಯೋಜನೆಗಳು ಶೀಘ್ರ ಪೂರ್ಣ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ, ಜು.16: ಕೇಂದ್ರ ಸರಕಾರದ ಮಟ್ಟದಲ್ಲಿ ಮಂಜೂರಾತಿಗೆ ಬಾಕಿ ಇರುವ ಜಿಲ್ಲೆಯ ವಿವಿಧ ಯೋಜನೆ ಮತ್ತು ಕಾಮಗಾರಿಗಳ ಪಟ್ಟಿಯನ್ನು ಕೂಡಲೇ ಸಲ್ಲಿಸಿ. ಈ ಬಗ್ಗೆ ಕೇಂದ್ರದ ಸಂಬಂಧ ಪಟ್ಟ ಸಚಿವರೊಂದಿಗೆ ಚರ್ಚಿಸಿ, ಶೀಘ್ರದಲ್ಲಿ ಮಂಜೂರು ಗೊಳಿಸಲು ಪ್ರಯತ್ನಿ ಸಲಾಗುವುದು ಎಂದು ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಶುಕ್ರವಾರ ಬೆಳಗ್ಗೆ ಹೊಸದಿಲ್ಲಿಯ ತಮ್ಮ ಕಚೇರಿಯಿಂದ ವೀಡಿಯೋ ಸಭೆಯ ಮೂಲಕ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮುಂಗಾರು ವಿನಿಂದಾದ ಹಾನಿಯ ಕುರಿತು ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಸಾಗರಮಾಲಾ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿ. ಉಪ್ಪುಂದದಲ್ಲಿ 130 ಕೋಟಿ ರೂ. ವೆಚ್ಚದಲ್ಲಿ ಬಂದರು ನಿರ್ಮಾಣದ ಕುರಿತಂತೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ. ಕೇಂದ್ರದಲ್ಲಿ ಹೊಸ ಮೀನುಗಾರಿಕಾ ಮಸೂದೆ ಸಿದ್ಧವಾಗುತ್ತಿದ್ದು, ಈ ಬಗ್ಗೆ ಸಲಹೆ ಮತ್ತು ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸಲ್ಲಿಸಿ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ 3ನೆ ಅಲೆ ಎದುರಿಸುವ ನಿಟ್ಟಿನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತಾ ಅಂತರ ಪಾಲನೆ ಕುರಿತು ಪರಿಶೀಲಿಸಿ. ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಸುರಕ್ಷತಾ ಅಂತರ ಪಾಲನೆ ಕುರಿತು, ಕಾರ್ಖಾನೆ ಗಳಿಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ಕಾಮಗಾರಿ ಆರಂಭಿಸಲಾಗಿರುವ ಆಕ್ಸಿಜನ್ ಘಟಕಗಳು ಶೀಘ್ರದಲ್ಲಿ ಕಾರ್ಯ ನಿರ್ವಹಣೆ ಮಾಡುವಂತೆ ಕ್ರಮ ಕೈಗೊಳ್ಳಿ. ದುರ್ಬಲ ವರ್ಗದವರಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಿ. ಅಪೌಷ್ಠಿಕ ಮಕ್ಕಳನ್ನು ಗುರುತಿಸಿ ಅವರಿಗೆ ಪೌಷ್ಠಿಕ ಆಹಾರ ಸೌಲಭ್ಯ ಒದಗಿಸುವಂತೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಎಚ್ಚರ ವಹಿಸುವಂತೆ ಸಚಿವೆ ಸೂಚಿಸಿದರು.

ಮಾನ್ಸೂನ್ ಅವಧಿಯಲ್ಲಿ ನೆರೆ ಹಾನಿಗೊಳಗಾಗುವ ಸಂತ್ರಸ್ಥರಿಗೆ ತಕ್ಷಣದಲ್ಲಿ ಪರಿಹಾರ ವಿತರಿಸುವಂತೆ ತಿಳಿಸಿದ ಸಂಸದರು, ಹಾನಿಗೊಳ ಗಾಗುವ ತಗ್ಗು ಪ್ರದೇಶಗಳನ್ನು ಗುರುತಿಸಿಕೊಂಡು ಆ ಪ್ರದೇಶದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಯಾವುದೇ ಸಂದರ್ಭದಲ್ಲಿ ನೆರವು ನೀಡಲು ಸಿದ್ಧವಾಗಿರುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಪ್ರಾಕೃತಿಕ ವಿಕೋಪದಿಂದ 110 ಕೋಟಿ ರೂ. ಮೂಲಸೌಕರ್ಯಕ್ಕೆ ಹಾನಿ ಯಾಗಿದ್ದು, ಇದರಲ್ಲಿ ಸಮುದ್ರಕೊರೆತದಿಂದ 99 ಕೋಟಿ ರೂ. ಹಾನಿ ಸಂಭವಿಸಿದೆ. ಈ ಬಗ್ಗೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೋವಿಡ್ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಒಟ್ಟು 50 ಮಕ್ಕಳ ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯ 2.40 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯ ನಡೆಯುತ್ತಿದೆ ಎಂದರು.

ಎಂಡೋ ಸಲ್ಫಾನ್ ಪೀಡಿತರಿಗೆ ಹಾಗೂ ಅವರ ಕುಟುಂಬದವರಿಗೆ ಲಸಿಕೆ ನೀಡಲಾಗುತ್ತಿದೆ. ನೆರೆ ಪರಿಹಾರಕ್ಕಾಗಿ 11 ಕೋಟಿ ರೂ. ಹಣ ಇದ್ದು, ಅನುದಾನದ ಕೊರತೆ ಇಲ್ಲ. ವಿಕೋಪ ನಿರ್ವಹಣೆಗೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ವಿವಿಧ ಇಲಾಖೆ ಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X