ಸೋರುವ ಗುಡಿಸಲಿನಲ್ಲಿ ವಾಸವಾಗಿದ್ದ ಮೂರು ಮಕ್ಕಳ ರಕ್ಷಣೆ
ಉಡುಪಿ, ಜು.16: ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ಯೊಂದಿಗೆ ಅಸಹಾಯಕ ಪರಿಸ್ಥಿತಿಯಲ್ಲಿದ್ದ ಮೂವರು ಮಕ್ಕಳನ್ನು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಜು.16ರಂದು ರಕ್ಷಿಸಿ ಮಕ್ಕಳ ರಕ್ಷಣಾ ಘಟಕದ ಸುಪರ್ಧಿಗೆ ಒಪ್ಪಿಸಿದ್ದಾರೆ.
14 ಮತ್ತು 10 ವರ್ಷದ ಇಬ್ಬರು ಬಾಲಕರು ಮತ್ತು 8 ವರ್ಷದ ಹೆಣ್ಣು ಮಗು ಅಸಹಾಯಕ ಪರಿಸ್ಥಿತಿಯಲ್ಲಿ ಸೋರುವ ಗುಡಿಸಲಿನಲ್ಲಿ ತಾಯಿ ಯೊಂದಿಗೆ ವಾಸವಾಗಿದ್ದರು. ಮಕ್ಕಳ ತಂದೆ ಜೂ. 27ರಂದು ಜಿಲ್ಲಾಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮೃತ ಪಟ್ಟಿದ್ದರು.
ಈ ಬಗ್ಗೆ ಮಾಹಿತಿ ಪಡೆದ ವಿಶು ಶೆಟ್ಟಿ ಸ್ಥಳಕ್ಕೆ ತೆರಳಿದರು. ಕೂಲಿ ಮಾಡಿ ಮಕ್ಕಳ ವಿದ್ಯಾಭ್ಯಾಸ ಹಾಗೂ ಸಾಕಲು ಸಾಧ್ಯವಿಲ್ಲದಿರುವುದರಿಂದ ಮಕ್ಕಳಿಗೆ ದಾರಿ ಕಲ್ಪಿಸುವಂತೆ ಮನವಿ ಮಾಡಿದ್ದರು. ಅದರಂತೆ ವಿಶು ಶೆಟ್ಟಿ ಮಕ್ಕಳನ್ನು ವಶಕ್ಕೆ ಪಡೆದ ಮಕ್ಕಳ ರಕ್ಷಣಾ ಇಲಾಖೆಗೆ ಹಸ್ತಾಂತರಿಸಿ ದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಮೂರು ಮಕ್ಕಳಿಗೆ ಕಾನೂನು ಪ್ರಕ್ರಿಯೆ ನಡೆಸಿ, ಪುನರ್ವಸತಿ ಕಲ್ಪಿಸಿದ್ದಾರೆ. ಮಕ್ಕಳ ಕಾನೂನು ಪರಿವೀಕ್ಷ ಣಾಧಿಕಾರಿ ಪ್ರಭಾಕರ ಆಚಾರ್ಯ ಸಹಕರಿಸಿದ್ದಾರೆ.





