ಮಂಗಗಳಿಗೆ ಪುನರ್ವಸತಿ ಕಲ್ಪಿಸಲು ಯೋಜನೆ ರೂಪಿಸದ ಸರಕಾರ: ಹೈಕೋರ್ಟ್ ಅಸಮಾಧಾನ

ಬೆಂಗಳೂರು, ಜು.16: ಬೆಂಗಳೂರಿನಲ್ಲಿ ಮಂಗಗಳ ಹಾವಳಿ ನಿಯಂತ್ರಿಸಲು ಹೊಸದಿಲ್ಲಿ ಹೈಕೋರ್ಟ್ ಜಾರಿ ಮಾಡಿರುವ ಮಾರ್ಗಸೂಚಿಯಂತೆ ಯೋಜನೆ ರೂಪಿಸಲು ನೀಡಿದ್ದ ಆದೇಶ ಪಾಲನೆ ಮಾಡದ ರಾಜ್ಯ ಸರಕಾರ ಹಾಗೂ ಬಿಬಿಎಂಪಿ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರು ನಗರದಲ್ಲಿ ಮಂಗಗಳ ಹಾವಳಿ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಅವುಗಳಿಗೆ ಪುನರ್ವಸತಿ ಕಲ್ಪಿಸುವಂತೆ ಸರಕಾರ ಮತ್ತು ಪಾಲಿಕೆಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‍ನಲ್ಲಿ ನಡೆಯಿತು.
ಜು.26ರೊಳಗೆ ಮಂಗಗಳ ಹಾವಳಿ ತಡೆಗೆ ಕೈಗೊಂಡ ಕ್ರಮ ಕುರಿತು ವರದಿ ನೀಡಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅಡಿ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ವಿಚಾರಣೆ ಮುಂದೂಡಿತು.
Next Story





