ದ.ಕ. ಜಿಲ್ಲೆ : ಕೋವಿಡ್‌ಗೆ 10 ಬಲಿ; 225ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಜು.16: ದ.ಕ. ಜಿಲ್ಲೆಯಲ್ಲಿ ಶುಕ್ರವಾರ 225 ಕೊರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಸಾವಿಗೀಡಾಗಿ ದ್ದಾರೆ. 208 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಪಾಸಿಟಿವಿಟಿ ದರ ಶೇ.3.14ಕ್ಕೆ ಏರಿಕೆಯಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಕೊರೋನ ಸೋಂಕಿತರ ಸಂಖ್ಯೆ 96,440 ಆಗಿದ್ದು, ಅವರಲ್ಲಿ 93,116 ಮಂದಿ ಗುಣಮುಖರಾಗಿದ್ದರೆ. 1,357 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 1967 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಟ್ಟು 80,786 ಮಾಸ್ಕ್ ಉಲ್ಲಂಘನೆ ಪ್ರಕರಣಗಳ ಪೈಕಿ 98,45,667 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story





