Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು ಜಿ.ಪಂ. ಸಾಮಾನ್ಯ ಸಭೆ: 540...

ತುಮಕೂರು ಜಿ.ಪಂ. ಸಾಮಾನ್ಯ ಸಭೆ: 540 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದ ರಾಕೇಶ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ16 July 2021 10:51 PM IST
share

ತುಮಕೂರು,ಜು.16: ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಇಂದು 2021-22ನೇ ಸಾಲಿನ ಲಿಂಕ್ ಡಾಕ್ಯುಮೆಂಟ್  ಕಾರ್ಯಕ್ರಮ, 15ನೇ ಹಣಕಾಸು ಯೋಜನೆ ಸೇರಿ ವಿವಿಧ ಕಾಮಗಾರಿಗಳಿಗೆ 540 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್ ಐಎಎಸ್ ಅವರು ಅನುಮೋದನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ವಿವಿಧ ಸ್ಥಾಯಿ ಸಮಿತಿ ಮತ್ತು ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳಡಿ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದರು.  

ಜಿಲ್ಲಾ ಮಟ್ಟದ ಅಧಿಕಾರಿಗಳು ಇಲಾಖಾವಾರು ರೂಪಿಸಿರುವ ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ಶಾಲಾ ಮಕ್ಕಳಿಗಾಗಿ ರೂಪಿಸಿರುವ ಅಕ್ಷರ ದಾಸೋಹ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರಲ್ಲದೆ ಪರಿಶಿಷ್ಟ ಜಾತಿ/ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು. ಅಲ್ಲದೆ ಬಾಡಿಗೆ ಕಟ್ಟಡದಲ್ಲಿ ನಡೆಯುವ ಹಾಸ್ಟೆಲ್‌ಗಳ ಸ್ಥಿತಿ ಗತಿಗಳನ್ನು ಗಮನಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ವಿಶೇಷ ತರಗತಿಗಳನ್ನು ನಡೆಸಲು ಸೂಕ್ತ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ನಿದೇರ್ಶನ ನೀಡಿದರು.

ಜಿಲ್ಲೆಯಲ್ಲಿ ಕೃಷಿ ಇಲಾಖೆಯಡಿ ರೈತರಿಗೆ ನೀಡಲಾಗುವ ಬಿತ್ತನೆ ಬೀಜ, ರಸಗೊಬ್ಬರ, ಮಳೆ-ಬೆಳೆ ಪರಿಸ್ಥಿತಿ ಬಗ್ಗೆ ಮತ್ತು ಬೆಳೆಯಲಾಗುವ ಮಿಶ್ರ ಬೆಳೆಗಳ ಬಗ್ಗೆ ತಾಲ್ಲೂಕುವಾರು ಅಂಕಿ- ಅಂಶಗಳನ್ನು ಕ್ರೋಢೀಕರಿಸಬೇಕು ಹಾಗೂ ತೋಟಗಾರಿಕೆ ಇಲಾಖೆಯಡಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ರೈತರಿಗೆ ಪ್ರೋತ್ಸಾಹ ಧನ, ಇತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯ, ಹೂಳೆತ್ತುವುದು, ಕಾಲುವೆ ನಿರ್ವಹಣೆ ಸೇರಿದಂತೆ ನೀರಾವರಿಗೆ ಸಂಬಂಧಿಸಿದ ಎಲ್ಲಾ ಕಾರ್ಯಕ್ರಮ ಹಾಗೂ ಮೂಲಭೂತ ಸೌಕರ್ಯಗಳನ್ನು ಅನುಷ್ಠಾನಗೊಳಿಸುವಂತೆ ರಾಕೇಶ್ ಸಿಂಗ್ ಸೂಚಿಸಿದರು.

ಸಭೆಯಲ್ಲಿ ಲಿಂಕ್ ಡಾಕ್ಯುಮೆಂಟ್‌ನಡಿ ಲೋಕೋಪಯೋಗಿ ಇಲಾಖೆಗೆ 797.99 ಲಕ್ಷ ರೂ., ಅಕ್ಷರ ದಾಸೋಹ-8879.93 ಲಕ್ಷ ರೂ., ಸಾಮಾನ್ಯ ಶಿಕ್ಷಣ-17397.12 ಲಕ್ಷ ರೂ., ಜನಶಿಕ್ಷಣ-60.11ಲಕ್ಷ ರೂ., ಕ್ರೀಡಾ ಮತ್ತು ಯುವಜನ ಸೇವೆಗಳು-111.69 ಲಕ್ಷ ರೂ., ಕಲೆ ಮತ್ತು ಸಂಸ್ಕೃತಿ-6 ಲಕ್ಷ ರೂ., ವೈದ್ಯಕೀಯ ಮತ್ತು ಜನಾರೋಗ್ಯ-5978 ಲಕ್ಷ ರೂ., ಕುಟುಂಬ ಕಲ್ಯಾಣ-3479.45 ಲಕ್ಷ ರೂ., ಆಯುಷ್-593.85ಲಕ್ಷ ರೂ., ಪರಿಶಿಷ್ಟ ಜಾತಿ ಕಲ್ಯಾಣ 2919.89 ಲಕ್ಷ ರೂ., ಪರಿಶಿಷ್ಟ ಪಂಗಡ ಕಲ್ಯಾಣ-1090.74 ಲಕ್ಷ ರೂ. ಹಿಂದುಳಿದ ವರ್ಗಗಳ ಕಲ್ಯಾಣ-5386.26 ಲಕ್ಷ ರೂ., ಅಲ್ಪಸಂಖ್ಯಾತರ ಕಲ್ಯಾಣ-499.83 ಲಕ್ಷ ರೂ., ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ-83.91 ಲಕ್ಷ ರೂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ- 303.72 ಲಕ್ಷ ರೂ., ಕೃಷಿ-391.5 ಲಕ್ಷ ರೂ., ಭೂಸಾರ ಮತ್ತು ಜಲ ಸಂರಕ್ಷಣೆ-133.20 ಲಕ್ಷ ರೂ., ತೋಟಗಾರಿಕೆ-799.93ಲಕ್ಷ ರೂ., ಪಶುಸಂಗೋಪನೆ-533.80 ಲಕ್ಷ ರೂ., ಮೀನುಗಾರಿಕೆ-188.82ಲಕ್ಷ ರೂ., ಅರಣ್ಯ(ಸಾಮಾಜಿಕ)-996.47 ಲಕ್ಷ ರೂ. ಸಹಕಾರ-3 ಲಕ್ಷ ರೂ., ಆರ್.ಡಿ.ಪಿ.ಆರ್. 391.17 ಲಕ್ಷ ರೂ., ಸಣ್ಣ ನೀರಾವರಿ-204.05 ಲಕ್ಷ ರೂ., ರೇಷ್ಮೆ -460.1 ಲಕ್ಷ ರೂ., ಗ್ರಾಮೀಣ ಮತ್ತು ಸಣ್ಣ ಕೈಗಾರಿಕೆಗಳು-112.88ಲಕ್ಷ ರೂ., ಕೈಮಗ್ಗ ಮತ್ತು ಜವಳಿ 69.92 ಲಕ್ಷ ರೂ., ರಸ್ತೆ ಮತ್ತು ಸೇತುವೆಗಳು-731.12ಲಕ್ಷ ರೂ., ಇತರ ವಿಜ್ಞಾನ ಸಂಶೋಧನೆ-55.50 ಲಕ್ಷ ರೂ.. ಸಚಿವಾಲಯ ಆರ್ಥಿಕ ಸೇವೆಗಳು- 87.57ಲಕ್ಷ ರೂ., ಕೃಷಿ ಮಾರುಕಟ್ಟೆ-4.41ಲಕ್ಷ ರೂ., 15ನೇ ಹಣಕಾಸು ಯೋಜನೆಗಾಗಿ 663.34ಲಕ್ಷ ರೂ., ಜಿಲ್ಲಾ ಪಂಚಾಯತಿ ಅನಿರ್ಬಂಧಿತ ಅನುದಾನಕ್ಕಾಗಿ 693.56ಲಕ್ಷ ರೂ ಸೇರಿದಂತೆ ಒಟ್ಟು 54058.29 ಲಕ್ಷ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X