Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಜನರ ಬದುಕಿಗೆ...

ಚಿಕ್ಕಮಗಳೂರು: ಜನರ ಬದುಕಿಗೆ ತೊಂದರೆಯಾಗದಂತೆ ಅರಣ್ಯ ಕಂದಾಯ ಭೂಮಿ ಸರ್ವೆ ನಡೆಸಿ

ಮುಳ್ಳಯ್ಯನಗಿರಿ ಮೀಸಲು ಅರಣ್ಯ ಯೋಜನೆ ವಿರೋಧಿ ಹೋರಾಟ ಸಮಿತಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 July 2021 11:13 PM IST
share

ಚಿಕ್ಕಮಗಳೂರು, ಜು.16: ಡೀಮ್ಡ್ ಫಾರೆಸ್ಟ್ ಮತ್ತು ಕಂದಾಯ ಭೂಮಿ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿ ಇತ್ತೀಚೆಗೆ ಜಂಟಿ ಸರ್ವೆ ಸೂಚಿಸಿದ್ದು, ಈ ಸರ್ವೆಯನ್ನು ತರಾತುರಿಯಲ್ಲಿ ಕೈಗೊಳ್ಳದೇ ಕಂದಾಯ ಮತ್ತು ಅರಣ್ಯ ಇಲಾಖೆ ಸರ್ವೇ ಅಧಿಕಾರಿಗಳು ಸ್ಥಳೀಯ ನಿವಾಸಿಗಳಿಗೆ ಮಾಹಿತಿ ನೀಡುವುದರೊಂದಿಗೆ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಸರ್ವೆ ಮಾಡಬೇಕು. ಜನರ ಬದುಕಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಕಸ್ತೂರಿ ರಂಗನ್ ವರದಿ ಹಾಗೂ ಮುಳ್ಳಯ್ಯನಗಿರಿ ಮೀಸಲು ಅರಣ್ಯ ಯೋಜನೆ ವಿರೋಧಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್.ವಿಜಯ್‍ಕುಮಾರ್ ಆಗ್ರಹಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೀಮ್ಡ್ ಫಾರೆಸ್ಟ್ ಮತ್ತು ಕಂದಾಯ ಭೂಮಿ ಸಮಸ್ಯೆ ಅನೇಕ ವರ್ಷಗಳಿಂದ ಬಗೆಹರಿಯದ ಸಮಸ್ಯೆಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಇತ್ತೀಚೆಗೆ ಅರಣ್ಯ ಹಾಗೂ ಕಂದಾಯ ಇಲಾಖಾಧಿಕಾರಿಗಳ ಸಭೆ ನಡೆಸಿ 10 ದಿನಗಳ ಒಳಗೆ ಸರ್ವೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲು ಸೂಚನೆ ನೀಡಿರುವುದನ್ನು ಸ್ವಾಗತಾರ್ಹ ಸಂಗತಿಯಾಗಿದೆ. ಆದರೆ ಜಿಲ್ಲೆಯಾದ್ಯಂತ ಇರುವ ಡೀಮ್ಡ್ ಫಾರೆಸ್ಟ್ ಹಾಗೂ ಕಂದಾಯ ಭೂಮಿಗಳ ಗಡಿ ಗುರುತು ಮಾಡುವ ಕೆಲಸವನ್ನು 10 ದಿನಗಳಲ್ಲಿ ಮಾಡಲು ಸಾಧ್ಯವೇ ಇಲ್ಲ. ಹೀಗೆ ಮಾಡಿದರೇ ಅಧಿಕಾರಿಗಳು ಗ್ರಾಮಸ್ಥರ ಗಮನಕ್ಕೆ ತಾರದೇ ತರಾತುರಿಯಲ್ಲಿ ಗೂಗಲ್ ಸರ್ವೆ ಮೂಲಕ ನಕ್ಷೆ ತಯಾರಿಸುವ ಅಪಾಯವಿದೆ. ಆದ್ದರಿಂದ ಜಂಟಿ ಸರ್ವೆಗೆ ಸೂಕ್ತ ಕಾಲಾವಕಾಶ ನೀಡಬೇಕು. ಸರ್ವೆ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಮಾಹಿತಿ ನೀಡಿ ಖುದ್ದು ಸ್ಥಳಕ್ಕೆ ಭೇಟಿ ಜನರ ಜೀವನ, ಬದುಕಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕೆಂದರು.

1980ರಲ್ಲಿ ಅರಣ್ಯ ಇಲಾಖೆಗೆ ವರ್ಗಾಯಿಸಲಾದ ಸಿ ಮತ್ತು ಡಿ ಕಂದಾಯ ಭೂಮಿಗೆ ಸಂಬಂಧಿಸಿದಂತೆ 1991, ಜ.3ರಂದು ಸರಕಾರ ಆದೇಶವೊಂದನ್ನು ಹೊರಡಿಸಿದ್ದು, ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಯಿಂದ ಹಿಂದಕ್ಕೆ ಪಡೆಯಲಾಗಿದೆ. ಜಿಲ್ಲಾಧಿಕಾರಿ ಇದನ್ನು ಪರಿಗಣಿಸಿ ಅದರಂತೆ ಸರ್ವೆ ಕಾರ್ಯ ಕೈಗೊಳ್ಳಲು ಸೂಚನೆ ನೀಡಬೇಕೆಂದ ಅವರು, ಮುಳ್ಳಯ್ಯನಗಿರಿ ಸಂರಕ್ಷಿತ ಸಂರಕ್ಷಿತ ಮೀಸಲು ಪ್ರದೇಶ ಘೋಷಣೆ ಸಂಬಂಧ ಸಮಿತಿ ವತಿಯಿಂದ ನಡೆಸಿದ ಹೋರಾಟದ ಹಿನ್ನೆಲೆಯಲ್ಲಿ 15890 ಎಕರೆ ಪ್ರದೇಶದ ಪೈಕಿ 5 ಸಾವಿರ ಎಕರೆಯಷ್ಟು ಪ್ರದೇಶವನ್ನು ಕೈಬಿಟ್ಟು 13 ಸಾವಿರ ಎಕರೆಗೂ ಹೆಚ್ಚು ಪ್ರದೇಶವನ್ನು ಡೀಮ್ಡ್ ಫಾರೆಸ್ಟ್ ಎಂದು ಏಕಪಕ್ಷೀಯ ತೀರ್ಮಾನ ಕೈಗೊಳ್ಳಲಾಗಿದೆ. ಈ ವೇಳೆ ಈ ಭಾಗದಲ್ಲಿರುವ ಜನವಸತಿ ಪ್ರದೇಶ, ಸ್ಮಶಾನ, ಗೋಮಾಳ, ಗ್ರಾಮಗಳು, ರಸ್ತೆಗಳು, ಜನವಸತಿ ಪ್ರದೇಶಗಳನ್ನೂ ಅರಣ್ಯ ವ್ಯಾಪ್ತಿಗೆ ಸೇರಿಸಲಾಗಿದೆ. ಆದ್ದರಿಂದ ಜಂಟಿ ಸರ್ವೆ ವೇಳೆ ಮುಳ್ಳಯ್ಯನಗಿರಿ ಸಂರಕ್ಷಿತ ಪ್ರದೇಶದ ಪ್ರಸ್ತಾವವನ್ನು ಹಿಂಪಡೆದು ಈ ಭಾಗದ ಗ್ರಾಮ ಪಂಚಾಯತ್‍ಗಳಲ್ಲಿ ಕೈಗೊಂಡಿರುವ ನಿರ್ಣಯಗಳಿಗೆ ಮನ್ನಣೆ ನೀಡಬೇಕು. ಈ ಸಂಬಂಧ ಜನಪ್ರತಿನಿಧಿಗಳು ಜಿಲ್ಲಾಡಳಿತ, ಸರಕಾರದ ಮೇಲೆ ಒತ್ತಡ ಹೇರಬೇಕೆಂದರು.

ಹಿಂದೆ 80ರ ದಶಕದಲ್ಲಿ ಮೀಸಲು ಅರಣ್ಯ ಘೋಷಣೆಗಾಗಿ ಸೆಕ್ಷನ್ 4(1) ನೋಟಿಫಿಕೇಶನ್ ಆಗಿದ್ದು, ಅದರಂತೆ ಜಿಲ್ಲಾದ್ಯಂತ ಸುಮಾರು 238 ಅರಣ್ಯ ವಲಯಗಳು ಇನ್ನೂ ಮೀಸಲು ಅರಣ್ಯದ ಅಂತಿಮ ಘೋಷಣೆಯಾಗಿಲ್ಲ. ಆದ್ದರಿಂದ ಇಂತಹ ಪ್ರದೇಶಗಳಲ್ಲಿ ವಾಸವಿರುವ ಜನವಸತಿಗಳ ಬಗ್ಗೆ ಮಾಹಿತಿ ಪಡೆದು ಅವುಗಳನ್ನು ಮೀಸಲು ಅರಣ್ಯ ಪ್ರದೇಶದಿಂದ ಹೊರಗಿಟ್ಟು ಅಂತಿಮಗೊಳಿಸಲು ಸುಪ್ರೀಂಕೋರ್ಟ್ ಈಗಾಗಲೇ ರಾಜ್ಯಾದ್ಯಂತ 8 ಎಫ್‍ಎಸ್‍ಒಗಳನ್ನು ನೇಮಿಸಲಾಗಿದೆ. ಚಿಕ್ಕಮಗಳೂರಿನ ಎಸ್‍ಎಫ್‍ಒ ಕಚೇರಿ ಕಡೂರು ಪಟ್ಟಣದಲ್ಲಿದ್ದು, ಇಂತಹ ಮೀಸಲು ಅರಣ್ಯ ವ್ಯಾಪ್ತಿಯ ಜನರು ತಮ್ಮ ಜಮೀನು, ಮನೆ ಮತ್ತಿತರ ಜಾಗಗಳಿಗೆ ಸಂಬಂಧಿಸಿದಂತೆ ಈ ಕಚೇರಿಯನ್ನು ಸಂಪರ್ಕಿಸಿ ಮನವಿ ಸಲ್ಲಿಸಿ ಸಮಸ್ಯೆಗೆ ಅಹವಾಲು ಸಲ್ಲಿಸಿ ಪರಿಹಾರ ಕಂಡುಕೊಳ್ಳಬೇಕೆಂದು ಇದೇ ವೇಳೆ ವಿಜಯ್‍ಕುಮಾರ್ ಮನವಿ ಮಾಡಿದರು.

ಜಿಲ್ಲಾದ್ಯಂತ ವಿವಿಧ ಮೀಸಲು ಅರಣ್ಯಗಳ ವ್ಯಾಪ್ತಿಯಲ್ಲಿ ಸಮಸ್ಯೆಗಳಿಂತ ಬಳಲುತ್ತಿರುವ ಕಾಮೇನಹಳ್ಳಿ, ಚುರ್ಚೆಗುಡ್ಡ, ಮಸಗಲಿಯಂತಹ ಪ್ರದೇಶಗಳಲ್ಲಿನ ಜನವಸತಿ ಮತ್ತು ಇತರ ಆವಶ್ಯಕತೆಗಳಿಗೆ ಅನುಗುಣವಾಗಿ ಪಟ್ಟಿ ತಯಾರಿಸಿ ಕಂದಾಯ ಮತ್ತು ಅರಣ್ಯ ಇಲಾಖೆಯವರು ಜಂಟಿ ಸರ್ವೆ ನಡೆಸಿ ಜನರ ಬದುಕಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ಫಾರಂ ನಂ.57ರಲ್ಲಿ ಸಾಗುವಳಿ ಜಮೀನಿನ ಸಕ್ರಮಕ್ಕೆ ಅರ್ಜಿ ಸಲ್ಲಿಸಿದವರಿಗೆ ಹಕ್ಕು ಪತ್ರ ನೀಡಬೇಕೆಂದರು.

ನಗರದ ಪ್ರದೇಶದಿಂದ 5 ಕಿಮೀ ವ್ಯಾಪ್ತಿಯಲ್ಲಿ ಮೀಸಲು ಅರಣ್ಯ ಪ್ರದೇಶವನ್ನು ಘೋಷಿಸಬಾರದು ಎಂದು ಸರಕಾರ ಆದೇಶ ಹೊರಡಿಸಿದೆ. ಅದರಂತೆ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ, ಕಡೂರು, ತರೀಕೆರೆ, ಅಜ್ಜಂಪುರದಂತಹ ನಗರ, ಪಟ್ಟಣಗಳ ವ್ಯಾಪ್ತಿಯಲ್ಲಿ ಎಫ್‍ಎಸ್‍ಒಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು. ನಗರ, ಪಟ್ಟಣಗಳ ವ್ಯಾಪ್ತಿಯಲ್ಲಿ ಅಭಿವೃದ್ಧಿ, ನಿವೇಶನ, ಸ್ಮಶಾನ ಮತ್ತಿತರ ಉದ್ದೇಶಗಳಿಗೆ ಅಗತ್ಯ ಇರುವ ಭೂಮಿಯನ್ನು ಉಳಿಸಿಕೊಳ್ಳಲು ಅವಕಾಶ ಇದ್ದು, ಈ ಸಂಬಂಧ ಗ್ರಾಪಂ ಹಾಗೂ ಕಂದಾಯ ಇಲಾಖೆಯವರು ಸೂಕ್ತ ಪತ್ರ ವ್ಯವಹಾರ ನಡೆಸಬೇಕು.

- ಎಸ್.ವಿಜಯ್‍ಕುಮಾರ್

ತಾಲೂಕಿನಲ್ಲಿ ಕಳೆದೊಂದು ವಾರದಿಂದ ಸುರಿದ ಮಳೆಯಿಂದಾಗಿ ಮತ್ತೋಡಿ ಹಾಗೂ ಚಿಕ್ಕಮಗಳೂರು ಸಂಪರ್ಕದ ರಸ್ತೆ ಕುಸಿದು ಮತ್ತೋಡಿ ಅರಣ್ಯ ವ್ಯಾಪ್ತಿಯ 10ಕ್ಕೂ ಹೆಚ್ಚು ಗ್ರಾಮಗಳ ಜನರಿಗೆ ತೀವ್ರ ಸಮಸ್ಯೆಯಾಗಿದೆ. ಜಿಲ್ಲಾಡಳಿತ ಶೀಘ್ರ ಈ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕು. ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು.

- ಕೆ.ಕೆ.ರಘು, ಸಮಿತಿ ಸಂಚಾಲಕ
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X