ಸಿಎಂ ಹುದ್ದೆಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಯಡಿಯೂರಪ್ಪ

ಹೊಸದಿಲ್ಲಿ : ಸಿಎಂ ಹುದ್ದೆಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಹೈಕಮಾಂಡ್ ನನ್ನ ರಾಜೀನಾಮೆ ಕೇಳಿಲ್ಲ. ನಾನು ರಾಜೀನಾಮೆ ನೀಡುತ್ತೇನೆ ಎಂಬುದು ಶುದ್ಧ ಸುಳ್ಳು. ಊಹಾಪೋಹಗಳಿಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೊಸದಿಲ್ಲಿಯಲ್ಲಿ ಹೇಳಿಕೆ ನೀಡಿದ್ದಾರೆ.
ಆಗಸ್ಟ್ ಮೊದಲ ವಾರ ಮತ್ತೆ ದೆಹಲಿಗೆ ಆಗಮಿಸಿ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಹಿರಿಯ ಸಚಿವರ ಜತೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಿಪಡಿಸುವುದು ಸರಿಯಲ್ಲ. ಈ ಯೋಜನೆ ಜಾರಿಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯಿಲ್ಲ. ಈ ಬಗ್ಗೆ ಸಂಬಂಧ ಪಟ್ಟವರಿಗೆ ಮನವರಿಕೆ ಮಾಡಿ ಯೋಜನೆ ಆದಷ್ಟು ಶೀಘ್ರ ಆರಂಭಿಸುತ್ತೇವೆ. ಎರಡೂ ರಾಜ್ಯಗಳು ಸಹೋದರರಂತೆ ನಡೆದುಕೊಳ್ಳಬೇಕೆಂಬುದು ನನ್ನ ಆಶಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
Next Story





