Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2011-20ರ ಅವಧಿಯಲ್ಲಿ ಅರೆ ಸೇನಾಪಡೆಗಳ 81...

2011-20ರ ಅವಧಿಯಲ್ಲಿ ಅರೆ ಸೇನಾಪಡೆಗಳ 81 ಸಾವಿರಕ್ಕೂ ಅಧಿಕ ಸಿಬ್ಬಂದಿ ಸ್ವಯಂ ನಿವೃತ್ತಿ

15,904 ಸೈನಿಕರ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ17 July 2021 1:29 PM IST
share
2011-20ರ ಅವಧಿಯಲ್ಲಿ ಅರೆ ಸೇನಾಪಡೆಗಳ 81 ಸಾವಿರಕ್ಕೂ ಅಧಿಕ  ಸಿಬ್ಬಂದಿ ಸ್ವಯಂ ನಿವೃತ್ತಿ

 ಹೊಸದಿಲ್ಲಿ: ಕಳೆದ ದಶಕದಲ್ಲಿ ಸಿಆರ್ ಪಿಎಫ್ ಹಾಗೂ ಬಿಎಸ್ ಎಫ್ ಸೇರಿದಂತೆ ಆರು ಅರೆ ಸೇನಾ ಪಡೆಗಳಿಂದ 81,000ಕ್ಕೂ ಅಧಿಕ ಸಿಬ್ಬಂದಿ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದು, ಈ ಪೈಕಿ  2017ರಲ್ಲಿ ಗರಿಷ್ಠ 11,000 ಸಿಬ್ಬಂದಿ ಸ್ವಯಂ ನಿವೃತ್ತಿ ಪಡೆದಿದ್ದಾರೆ ಎಂದು ಕೇಂದ್ರ ಗೃಹಸಚಿವಾಲಯವು ತಿಳಿಸಿದೆ.

ಕೇಂದ್ರ ಗೃಹ ಸಚಿವಾಲಯದ ದತ್ತಾಂಶದ ಪ್ರಕಾರ 2011-2020ರ ಅವಧಿಯಲ್ಲಿ 15,904 ಸಿಬ್ಬಂದಿ ತಮಗೆ ಸಂಬಂಧಪಟ್ಟ ಸೇನಾಪಡೆಗೆ ರಾಜೀನಾಮೆ ನೀಡಿದ್ದು, 2013ರಲ್ಲಿ ಗರಿಷ್ಠ 2,332 ಯೋಧರು ರಾಜೀನಾಮೆ ಸಲ್ಲಿಸಿದ್ದರು.

ಇಂತಹ ನಿವೃತ್ತಿಗಳು ಅಥವಾ ರಾಜೀನಾಮೆಗಳಿಗೆ ನಿಖರ ಕಾರಣವನ್ನು ಪ್ರತಿಪಾದಿಸುವ ನಿರ್ದಿಷ್ಟ ಅಧ್ಯಯನವನ್ನು ಈ ಅವಧಿಯಲ್ಲಿ ಗೃಹ ಸಚಿವಾಲಯ ನಡೆಸಿಲ್ಲ. ಆದರೆ ಅರೆ ಸೇನಾ ಪಡೆಗಳು ಸ್ವಯಂ ಆಗಿ ನಡೆಸಿರುವ ವಿಶ್ಲೇಷಣೆಯ ಪ್ರಕಾರ ವೈಯಕ್ತಿಕ ಹಾಗೂ ಕೌಟುಂಬಿಕ ಸಮಸ್ಯೆಗಳು, ಆರೋಗ್ಯಸಂಬಂಧಿ ಕಾರಣಗಳು ಹಾಗೂ ಉತ್ತಮ ಅವಕಾಶಗಳನ್ನುಅರಸುವ ಧೋರಣೆಗಳೇ ಹುದ್ದೆ ತ್ಯಜಿಸಲು ಕೆಲವು ಪ್ರಮುಖ ಕಾರಣವಾಗಿವೆ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಎಲ್ಲಾ ಅಂಕಿ-ಅಂಶಗಳು  ಆರು ಅರೆ ಸೇನಾಪಡೆಗಳಾಗಿರುವ ಸಿಆರ್ ಪಿಎಫ್, ಬಿಎಸ್ ಎಫ್, ಐಟಿಬಿಪಿ(ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್), ಎಸ್ ಎಸ್ ಬಿ(ಸಶಸ್ತ್ರ ಸೀಮಾ ದಳ), ಸಿಐಎಸ್ ಎಫ್(ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್) ಹಾಗೂ ಅಸ್ಸಾಂ ರೈಫಲ್ಸ್ ಗೆ ಸಂಬಂಧಿಸಿದ್ದಾಗಿದೆ.

ಈ ಎಲ್ಲ ಪಡೆಗಳಿಂದ 2011ರಿಂದ ಒಟ್ಟು 81,007 ಸಿಬ್ಬಂದಿ ಸ್ವಯಂ ನಿವೃತ್ತಿ ಪಡೆದಿದ್ದಾರೆ ಎಂದು ದತ್ತಾಂಶದಿಂದ ತಿಳಿದುಬಂದಿದೆ.

ಕಳೆದ ದಶಕದಲ್ಲಿ ಎಲ್ಲ ಪಡೆಗಳ ಪೈಕಿ ಬಿಎಸ್ ಎಫ್ ನಿಂದ  ಗರಿಷ್ಠ 36,768 ಸಿಬ್ಬಂದಿ ಸ್ವಯಂ ನಿವೃತ್ತಿ ಪಡೆದಿದ್ದಾರೆ. ಉಳಿದಂತೆ ಸಿಆರ್ ಪಿಎಫ್ (26,164)ಸಿಐಎಸ್ ಎಫ್ (6,705), ಅಸ್ಸಾಂ ರೈಫಲ್ಸ್ (4,947) , ಐಟಿಬಿಪಿ(3,193) ಹಾಗೂ ಎಸ್ ಎಸ್ ಬಿ(3,230) ಸಿಬ್ಬಂದಿಗಳು ಸ್ವಯಂ ನಿವೃತ್ತಿ ಪಡೆದಿದ್ದಾರೆ.

2017ರಲ್ಲಿ ಗರಿಷ್ಠ 11,728 ಸಿಬ್ಬಂದಿ ಸ್ವಯಂ ನಿವೃತ್ತಿ ಪಡೆದಿದ್ದರು. 2011ರಲ್ಲಿ 11,260 ಸಿಬ್ಬಂದಿ, 2012ರಲ್ಲಿ 10,859, 2013ರಲ್ಲಿ 9,355, 2014ರಲ್ಲಿ 5,931, 2015ರಲ್ಲಿ 1,686, 2016ರಲ್ಲಿ 6,981 , 2018ರಲ್ಲಿ 8,132, 2019ರಲ್ಲಿ 7,611 ಹಾಗೂ 2020ರಲ್ಲಿ 5,935  ಸಿಬ್ಬಂದಿ ಸ್ವಯಂ ನಿವೃತ್ತಿಯಾಗಿದ್ದರು.

ಎಲ್ಲ ಆರು ಪ್ಯಾರಾ ಮಿಲಿಟರಿ ಪಡೆಗಳ ಒಟ್ಟು ಸಿಬ್ಬಂದಿ ಬಲ ಸುಮಾರು 10 ಲಕ್ಷ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X