ಬಕ್ರೀದ್: ಮಸೀದಿಗಳಲ್ಲಿ ಶೇ. 50ರಷ್ಟು ಸಾಮರ್ಥ್ಯದೊಂದಿಗೆ ನಮಾಝ್ ನಿರ್ವಹಣೆ
ರಾಜ್ಯ ಸರಕಾರದ ಹೊಸ ಆದೇಶ

ಬೆಂಗಳೂರು, ಜು.17: ಬಕ್ರೀದ್ ಪ್ರಯುಕ್ತ ಮಸೀದಿಗಳಲ್ಲಿ ನಮಾಝ್ ನಿರ್ವಹಿಸಲು ಅವಕಾಶ ಕಲ್ಪಿಸಿ ರಾಜ್ಯ ಸರಕಾರ ಜು.16ರಂದು ಹೊರಡಿಸಿರುವ ಆದೇಶದಲ್ಲಿ ಆಯಾ ಮಸೀದಿಗಳಲ್ಲಿ 50 ಜನರು ಮೀರದಂತೆ ಎಂಬುದರ ಬದಲಾಗಿ ಆಯಾ ಮಸೀದಿಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ.50ರಷ್ಟು ಜನರು ಮೀರದಂತೆ ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಮುಖ್ತಾರ್ ಪಾಷ ಎಚ್.ಜಿ. ತಿದ್ದುಪಡಿ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

Next Story





