Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸೆಸೆಲ್ಸಿ ಪರೀಕ್ಷೆಗೆ ನಿಯೋಜನೆಗೊಂಡಿರುವ...

ಎಸೆಸೆಲ್ಸಿ ಪರೀಕ್ಷೆಗೆ ನಿಯೋಜನೆಗೊಂಡಿರುವ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ಪೂರ್ಣ: ಸುರೇಶ್‍ ಕುಮಾರ್

ವಾರ್ತಾಭಾರತಿವಾರ್ತಾಭಾರತಿ17 July 2021 5:53 PM IST
share
ಎಸೆಸೆಲ್ಸಿ ಪರೀಕ್ಷೆಗೆ ನಿಯೋಜನೆಗೊಂಡಿರುವ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ಪೂರ್ಣ: ಸುರೇಶ್‍ ಕುಮಾರ್

ಬೆಂಗಳೂರು, ಜು.17: ಎಸೆಸೆಲ್ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ನಿಯೋಜಿತರಾಗಿರುವ 1,19,469 ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳಿಗೆ ಈಗಾಗಲೇ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಪಡೆದವರನ್ನಷ್ಟೆ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. 

ಸೋಮವಾರ(ಜು.19)ದಿಂದ ಆರಂಭವಾಗಲಿರುವ 2020-21ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಸಿದ್ಧತೆಗಳನ್ನು ಮತ್ತು ಅಣಕು ಪರೀಕ್ಷೆಗಳನ್ನು ಪರಿಶೀಲಿಸಲು ಬೆಂಗಳೂರು ನಗರದ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅವರು ಮಾತನಾಡಿದರು.

ರಾಜ್ಯದ 14,929 ಪ್ರೌಢಶಾಲೆಗಳಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಪ್ರವೇಶಪತ್ರಗಳನ್ನು ಆಯಾ ಮುಖ್ಯೋಪಾಧ್ಯಾಯರು ಮಂಡಳಿಯ ಜಾಲತಾಣದ ಮೂಲಕ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಈಗಾಗಲೇ ಬಹುತೇಕ ವಿದ್ಯಾರ್ಥಿಗಳು ಪ್ರವೇಶ ಪತ್ರ ಪಡೆದಿದ್ದಾರೆ. ಇಂದು ಶಾಲಾವಧಿಯೊಳಗೆ ಉಳಿದ ಮಕ್ಕಳು ಪ್ರವೇಶ ಪತ್ರ ಪಡೆದು ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಸೋಮವಾರ ಪರೀಕ್ಷೆಗೆ ಹಾಜರಾಗಲಿದ್ದಾರೆಂದು ಅವರು ತಿಳಿಸಿದ್ದಾರೆ.

ಸೋಮವಾರ ಪರೀಕ್ಷೆ ಇರುವುದರಿಂದ ರವಿವಾರ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಆವರಣವನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಜು.19ರಂದು ಕೋರ್ ವಿಷಯಗಳಿಗೆ ಮತ್ತು 22ರಂದು ಭಾಷಾ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೊಠಡಿಯಲ್ಲಿ 12 ಮಕ್ಕಳಿರಬೇಕು. ಒಂದು ಡೆಸ್ಕ್ ಗೆ ಒಬ್ಬ ಪರೀಕ್ಷಾರ್ಥಿ ಮಾತ್ರವೇ ಇರಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ತುರ್ತು ಚಿಕಿತ್ಸಾ ವಾಹನ: ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನವನ್ನು ಮೀಸಲಿಡುವುದು. ಪರೀಕ್ಷಾ ಸಿಬ್ಬಂದಿಯೂ ಯಾವುದೇ ಸಂದರ್ಭದಲ್ಲೂ ಸುರಕ್ಷಿತ ಅಂತರ ಕಾಪಾಡಿಕೊಳ್ಳಬೇಕು. ಅಗತ್ಯ ಬಿದ್ದರೆ ಸಿಬ್ಬಂದಿ ಫೇಸ್ ಶೀಲ್ಡ್ ಬಳಸುವುದು ಕಡ್ಡಾಯ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಮಲ್ಲೇಶ್ವರಂ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ, ಎಂಇಎ ಪ್ರೌಢಶಾಲೆ, ಸದಾಶಿವನಗರದ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆ, ದಾಸರಹಳ್ಳಿ, ಪೀಣ್ಯದ ಸರ್ಕಾರಿ ಪ್ರೌಢಶಾಲಾ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಕೊನೆ ಹಂತದ ಸಿದ್ಧತೆಗಳನ್ನು ಗಮನಿಸಿದರು. 

ಕೋವಿಡ್ ಕೇರ್ ಸೆಂಟರ್ ಸ್ಥಾಪನೆ
►ಪರೀಕ್ಷಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೆ ಅಂತಹ ಪರೀಕ್ಷಾರ್ಥಿಗೆ ತಾಲೂಕಿಗೊಂದು ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪಿಸಿ ಅಲ್ಲಿಯೇ ಅವರಿಗೆ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗುತ್ತದೆ. ಕುಟುಂಬದಲ್ಲಿ ಯಾರಿಗಾದರೂ ಸೋಂದು ತಗುಲಿದ್ದು, ಪರೀಕ್ಷಾರ್ಥಿ ಐಸೋಲೇಷನ್‍ನಲ್ಲಿದ್ದರೆ ಅವರನ್ನು ತಪಾಸಣೆ ನಡೆಸಿ ಆರೋಗ್ಯವಾಗಿರುವುದು ಕಂಡುಬಂದರೆ ಸಮೀಪದ ವಿದ್ಯಾರ್ಥಿ ಕೋವಿಡ್ ಕೇರ್ ಸೆಂಟರ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಕೋವಿಡ್ ಕೇರ್ ಕೇಂದ್ರದಲ್ಲಿ ಒಂದು ಆಂಬುಲೆನ್ಸ್ ವಾಹನ ಕಾಯ್ದಿರಿಸಲಾಗಿದೆ.
►ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಆಯಾ ಜಿಲ್ಲಾಧಿಕಾರಿಗಳು ಪರೀಕ್ಷಾ ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಸೆಂಟರ್ ಗಳನ್ನು ಮುಚ್ಚಿಸಲು ಮತ್ತು ಸೆಕ್ಷನ್-144 ಜಾರಿಗೊಳಿಸಲು ಕ್ರಮ ವಹಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ರವಾನೆ ಸಮಯದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸರು ಪರೀಕ್ಷಾ ಕೇಂದ್ರದ ಬಳಿ ಸಂಚಾರ ದಟ್ಟಣೆಯಾಗದಂತೆ ಕ್ರಮ ವಹಿಸಲಿದ್ದಾರೆ.
►ಪರೀಕ್ಷೆಗೆ ನೋಂದಾಯಿಸಿದ ಯಾವುದೇ ವಿದ್ಯಾರ್ಥಿ ಪ್ರವೇಶ ಪತ್ರ ಪಡೆಯಲು ಸಾಧ್ಯವಾಗದಿದ್ದಲ್ಲಿ ಸಂಬಂಧಿಸಿದ ಬಿಇಒ, ಡಿಡಿಪಿಐಗಳನ್ನು ಸಂಪರ್ಕಿಸಿ ಪಡೆಯಬಹುದು. ಇದರ ಸಮನ್ವಯಕ್ಕಾಗಿ ಜಿಲ್ಲಾ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X