ಇಂದ್ರಜಿತ್-ಕುಮಾರಸ್ವಾಮಿ ಭೇಟಿ ನಿಜ: ನಿಖಿಲ್ ಕಮಾರಸ್ವಾಮಿ

ಬೆಂಗಳೂರು, ಜು. 17: 'ಪತ್ರಕರ್ತ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಮ್ಮ ತೋಟದ ಮನೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಆಗಿದ್ದು ನಿಜ. ಆದರೆ, ರಾಜ್ಯದಲ್ಲಿಂದು ನಡೆಯುತ್ತಿರುವ ಚರ್ಚೆಗೆ ಆ ವಿಷಯವನ್ನು ಥಳಕು ಹಾಕುವುದು ಸರಿಯಲ್ಲ' ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ಷೇಪಿಸಿದ್ದಾರೆ.
ಶನಿವಾರ ಇಲ್ಲಿನ ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಇಂದ್ರಜಿತ್ ಲಂಕೇಶ್ ಹಾಗೂ ಎಚ್.ಡಿ.ಕುಮಾರಸ್ವಾಮಿ ಜೊತೆಗಿರುವ ಫೋಟೊಗಳು ವೈರಲ್ ಆಗಿದ್ದು, ಅವರು ಭೇಟಿಯಾಗಿದ್ದನ್ನು ಬೇರೆ ಬೇರೆ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ಎಲ್ಲದಕ್ಕೂ ಕುಮಾರಸ್ವಾಮಿ ಅವರನ್ನು ಜೋಡಿಸುವುದು ಒಳ್ಳೆಯದಲ್ಲ' ಎಂದು ಇದೇ ವೇಳೆ ಪ್ರತಿಕ್ರಿಯೆ ನೀಡಿದರು.
Next Story





