ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಸಭೆ
![ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಸಭೆ ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಸಭೆ](https://www.varthabharati.in/sites/default/files/images/articles/2021/07/17/299236-1626528471.jpg)
ಮಂಗಳೂರು, ಜು. 17: ದ.ಕ.ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯ ಪ್ರಥಮ ಸಭೆಯು ಸಮಿತಿಯ ಜಿಲ್ಲಾಧ್ಯಕ್ಷ ಅಬ್ಬಾಸ್ ಅಲಿಯ ಅಧ್ಯಕ್ಷತೆಯಲ್ಲಿ ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಶನಿವಾರ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಅಸಂಘಟಿತ ಕಾರ್ಮಿಕರಿಗೆ ಸರಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ತಿಳುವಳಿಕೆ ನೀಡಿ ಕಾರ್ಮಿಕ ಕಾರ್ಡ್ ಅವರ ಕೈಗೆ ಸಿಗುವಂತೆ ಕೆಲಸ ಮಾಡಬೇಕು ಎಂದರು.
ಸಭೆಯಲ್ಲಿ ನ್ಯಾಯವಾದಿ ನವನೀತ್, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ನ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಅರುಣ್ ಶೆಟ್ಟಿ ನರಿಕೊಂಬು, ಪಾಣೆಮಂಗಳೂರು ಬ್ಲಾಕ್ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ನ ಅಧ್ಯಕ್ಷ ರೋಷನ್ ರೈ ಉಪಸ್ಥಿತರಿದ್ದರು.
ಜಿಲ್ಲಾ ಅಸಂಘಟಿತ ಸಮಿತಿಯ ಸಾಮಾಜಿಕ ಜಾಲತಾಣದ ಮುಖ್ಯಸ್ಥ ನಿರಂಜನ್ ರೈ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪದ್ಮನಾಭ ಬಂಗೇರ ವಂದಿಸಿದರು.
Next Story