Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋಹತ್ಯೆ ನಿಯಂತ್ರಣಕ್ಕೆ ಬಿಗಿ ಕ್ರಮ :...

ಗೋಹತ್ಯೆ ನಿಯಂತ್ರಣಕ್ಕೆ ಬಿಗಿ ಕ್ರಮ : ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ತಪ್ಪಿತಸ್ಥ ವ್ಯಕ್ತಿಗಳ ವಿರುದ್ಧ 5-7 ವರ್ಷಗಳ ಸೆರೆವಾಸ ಹಾಗೂ 10ಲಕ್ಷ ರೂ.ಗಳವರೆಗೆ ದಂಡ

ವಾರ್ತಾಭಾರತಿವಾರ್ತಾಭಾರತಿ17 July 2021 7:18 PM IST
share
ಗೋಹತ್ಯೆ ನಿಯಂತ್ರಣಕ್ಕೆ ಬಿಗಿ ಕ್ರಮ : ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ: ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುವವರ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ 2020ರನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಏರ್ಪಡಿಸಲಾಗಿದ್ದ ಅಧಿಕಾರಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಂಶಯಾಸ್ಪದ ಸಾಗಾಣಿಕೆ ಹಾಗೂ ಕಸಾಯಿಖಾನೆಗೆ ಕೊಂಡೊಯ್ಯುವುದು ತಿಳಿದುಬಂದಲ್ಲಿ ಅಂತಹ ವ್ಯಕ್ತಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಗುರಿಪಡಿಸಲಾಗುವುದು. ತಪ್ಪಿತಸ್ಥ ವ್ಯಕ್ತಿಗಳ ವಿರುದ್ಧ 5-7ವರ್ಷಗಳ ಸೆರೆವಾಸ ಹಾಗೂ 10ಲಕ್ಷ ರೂ.ಗಳವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇರುವುದಾಗಿ ಅವರು ತಿಳಿಸಿದ ಅವರು, ವಶಕ್ಕೆ ಪಡೆಯಲಾದ ಜಾನುವಾರುಗಳನ್ನು ಗೋಶಾಲೆಗೆ ಕಳುಹಿಸಲಾಗುವುದು ಎಂದರು.

ಈ ಕಾಯ್ದೆಯ ಕರಾರುವಾಕ್ಕು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಹಶೀಲ್ದಾರರು, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿಗಳನ್ನು ಒಳಗೊಂಡಂತೆ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಚೆಕ್‌ಪೋಸ್ಟ್‌ಗಳ ಮೂಲಕ ಅಕ್ರಮವಾಗಿ ಜಾನುವಾರು ಸಾಗಾಣಿಕೆ ವಾಹನಗಳ ತಪಾಸಣೆ ನಡೆಸಿ ಕ್ರಮ ಕೈಗೊಳ್ಳಲು ಅಧಿಕಾರ ಹೊಂದಿರಲಿದೆ. ಅನುಮತಿ ರಹಿತವಾಗಿ ಜಾನುವಾರಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ಯಾವುದೇ ಮೂಲದಿಂದ ಅಕ್ರಮ ಜಾನುವಾರು ಸಾಗಾಣಿಕೆ ನಡೆದದ್ದು ಕಂಡುಬಂದಲ್ಲಿ ಸಂಬಂಧಿತ ತಾಲೂಕುಗಳ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಪಶು ಇಲಾಖೆಯ ವೈದ್ಯಕೀಯ ಸಿಬ್ಬಂಧಿಗಳು ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ,  ಹಾಗೂ ನಿರ್ಲಕ್ಷ್ಯ ವಹಿಸದೆ ತಮ್ಮ ಜವಾಬ್ದಾರಿಯರಿತು ಶಾಂತಿ ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಕಾರ್ಯನಿರ್ವಹಿಸಬೇಕು. ಅಗತ್ಯವಿದ್ದಲ್ಲಿ ರಕ್ಷಣಾ ಇಲಾಖೆಯ ಸಹಕಾರ ಪಡೆಯುವಂತೆ ಸೂಚಿಸಿದ ಅವರು, ಮುಂಬರುವ ಬಕ್ರೀದ್ ಹಬ್ಬದ ದಿನದಂದು ಕಡ್ಡಾಯವಾಗಿ ಕಸಾಯಿಖಾನೆಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಖಾಸಗಿ ಸಂಸ್ಥೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಗೋಶಾಲೆಗಳ ಚಟುವಟಿಕೆಗಳಿಗೆ 130ಲಕ್ಷ ರೂ.ಗಳ ಬೇಡಿಕೆ ಇದ್ದು, ಮಂಜೂರು ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿಗಳು ಅನುಮೋದನೆ ನೀಡಿದರು.

ಸಭೆಯಲ್ಲಿ ಮಹಾನಗರಪಾಲಿಕೆ ಆಯುಕ್ತ ಚಿದಾನಂದ ಎಸ್.ವಟಾರೆ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಶಿವಯೋಗಿ ಯಲಿ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ರೇಖಾ ಸೇರಿದಂತೆ ಜಿಲ್ಲೆಯ ಎಲ್ಲಾ ಪಶುವೈದ್ಯಾಧಿಕಾರಿಗಳು, ಸಂಬಂಧಿತ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X