ಮೈಕ್ರೋಬಯಾಲಾಜಿಸ್ಟ್ ಹುದ್ದೆಗೆ ಸಂದರ್ಶನ
ಉಡುಪಿ, ಜು.17: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಪ್ರಯೋಗಾಲಯದಲ್ಲಿ ಖಾಲಿ ಇರುವ ಮೈಕ್ರೋಬಯಾಲಾಜಿಸ್ಟ್ ಹುದ್ದೆಗೆ ಮೆಡಿಕಲ್ ಮೈಕ್ರೋಬಯಾಲಜಿ ಅರ್ಹತೆ ಹೊಂದಿರುವವರಿಗೆ ಮಾಸಿಕ 40,000 ರೂ. ವೇತನದಂತೆ ಗುತ್ತಿಗೆ ಆಧಾರದಲ್ಲಿ ಮುಂದಿನ ಆದೇಶದವರೆಗೆ ನೇಮಕಾತಿ ಮಾಡಿಕೊಳ್ಳಲು ಜು.26ರಂದು ಬೆಳಗ್ಗೆ 10:30ರಿಂದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





