ಉಡುಪಿ : 94 ಮಂದಿಗೆ ಕೊರೋನ ಪಾಸಿಟಿವ್, ಕೋವಿಡ್ ಮಹಿಳೆ ಬಲಿ
![ಉಡುಪಿ : 94 ಮಂದಿಗೆ ಕೊರೋನ ಪಾಸಿಟಿವ್, ಕೋವಿಡ್ ಮಹಿಳೆ ಬಲಿ ಉಡುಪಿ : 94 ಮಂದಿಗೆ ಕೊರೋನ ಪಾಸಿಟಿವ್, ಕೋವಿಡ್ ಮಹಿಳೆ ಬಲಿ](https://www.varthabharati.in/sites/default/files/images/articles/2021/07/17/299253-1626533870.jpg)
ಉಡುಪಿ, ಜು.17: ಜಿಲ್ಲೆಯಲ್ಲಿ ಶನಿವಾರ 94 ಮಂದಿ ಕೊರೋನಕ್ಕೆ ಪಾಸಿಟಿವ್ ಬಂದಿದ್ದು, ಒಬ್ಬ ಮಹಿಳೆ ಸೊಂಕಿಗೆ ಬಲಿಯಾಗಿದ್ದಾರೆ. ದಿನದಲ್ಲಿ 130 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಸೋಂಕಿಗೆ ಸಕ್ರಿಯರಾಗಿ ರುವವರ ಸಂಖ್ಯೆ 865ಕ್ಕೆ ಇಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು ಕೋವಿಡ್-19 ಸೋಂಕಿನಿಂದ ಕುಂದಾಪುರದ 58 ವರ್ಷ ಪ್ರಾಯದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಸಾಂಕ್ರಾಮಿಕಕ್ಕೆ ಬಲಿಯಾದ ವರ ಸಂಖ್ಯೆ 404ಕ್ಕೇರಿದೆ. ಕೋವಿಡ್ ಲಕ್ಷಣದೊಂದಿಗೆ ಉಸಿರಾಟದ ತೊಂದರೆ, ನ್ಯೂಮೋನಿಯಾಕ್ಕಾಗಿ ಮಹಿಳೆ ಜು.10ಕ್ಕೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಬಹುಅಂಗ ವೈಫಲ್ಯದಿಂದ ಜು.16ಕ್ಕೆ ಮೃತಪಟ್ಟರು.
ದಿನದಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟ 94 ಮಂದಿಯಲ್ಲಿ 45 ಮಂದಿ ಪುರುಷರು ಹಾಗೂ 49 ಮಂದಿ ಮಹಿಳೆಯರು. ಉಡುಪಿ ತಾಲೂಕಿನ 42, ಕುಂದಾಪುರ ತಾಲೂಕಿನ 27, ಕಾರ್ಕಳ ತಾಲೂಕಿನ 22 ಹಾಗೂ ಹೊರಜಿಲ್ಲೆಗಳ ಮೂವರು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 9 ಮಂದಿ ಕೋವಿಡ್ ಆಸ್ಪತ್ರೆ ಹಾಗೂ ಉಳಿದ 85 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಶುಕ್ರವಾರ 130 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 66,929ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3543 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 68,198ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 7,32,470 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.
ಒಬ್ಬರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ: ಹೊರಜಿಲ್ಲೆಯ ಒಬ್ಬರಲ್ಲಿ ಇಂದು ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಸದ್ಯ ಜಿಲ್ಲೆಯಲ್ಲಿ ಹತ್ತು ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.
7388 ಮಂದಿಗೆ ಕೋವಿಡ್ ಲಸಿಕೆ
ಉಡುಪಿ ಜಿಲ್ಲೆಯಲ್ಲಿ ಶನಿವಾರ 7,388 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 5,583 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿ ದರೆ, 1,805 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು 18ರಿಂದ 44 ವರ್ಷದೊಳಗಿನ 2,826 ಮಂದಿ ಮೊದಲ ಡೋಸ್ ಹಾಗೂ 116 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 2731 ಮಂದಿ ಮೊದಲ ಡೋಸ್ ಹಾಗೂ 1,644 ಮಂದಿ ಎರಡನೇ ಡೋಸ್ನ್ನು ಪಡೆದಿದ್ದಾರೆ. 11 ಮಂದಿ ಆರೋಗ್ಯ ಕಾರ್ಯ ಕರ್ತರು ಹಾಗೂ 60 ಮಂದಿ ಮುಂಚೂಣಿ ಕಾರ್ಯಕರ್ತರಿಗೂ ಇಂದು ಲಸಿಕೆ ನೀಡಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 4,63,964 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 1,59,930 ಮಂದಿ ಎರಡನೇ ಡೋಸ್ನ್ನು ಪಡೆದು ಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.