ಉಡುಪಿ: ಸಿಇಟಿ ಪರೀಕ್ಷೆಗೆ ತರಬೇತಿ
ಉಡುಪಿ, ಜು.17: ರಾಜ್ಯ ಮುಕ್ತ ವಿಶ್ವದ್ಯಾನಿಲಯದ ಕ.ರಾ.ಮು. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ರಾಜ್ಯ ಸರಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ)30 ದಿನಗಳ ಆನ್‌ಲೈನ್ ತರೇತಿಯನ್ನು ನೀಡಲು ನಿರ್ಧರಿಸಲಾಗಿದೆ.
ಆಸಕ್ತರು ಜು.23ರೊಳಗೆ ರಾಜ್ಯ ಮುಕ್ತ ವಿಶ್ವದ್ಯಾನಿಲಯದ ಮುಕ್ತಗಂಗೋತ್ರಿ ಆವರಣದಲ್ಲಿರುವ ಕ.ರಾ.ಮು. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯೊಳಗೆ ಹೆರನ್ನು ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ:0821-2515944ನ್ನು ಸಂಪರ್ಕಿಸುವಂತೆ ಮುಕ್ತ ವಿವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





