ಎಸೆಸೆಲ್ಸಿ ಪ್ರವೇಶ ಪತ್ರ ಮಾಹಿತಿಗೆ ಸಹಾಯವಾಣಿ
ಮಂಗಳೂರು, ಜು.17: ಪ್ರಸಕ್ತ 2021ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳು ಜು.19 ಮತ್ತು 22ರಂದು ಜಿಲ್ಲೆಯ 179 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 32,657 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಎಸೆಸೆಲ್ಸಿ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ಆಯಾ ಶಾಲಾ ಲಾಗಿನ್ನಲ್ಲಿ ಲಭ್ಯವಿದ್ದು, ಶಾಲಾ ಮುಖ್ಯಸ್ಥರ ಮೂಲಕ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರವೇಶ ಪತ್ರಗಳನ್ನು ವಿತರಿಸಲಾಗಿದೆ. ಯಾವುದಾದರೂ ವಿದ್ಯಾರ್ಥಿಗಳಿಗೆ ಜಿಲ್ಲೆಯ ಯಾವುದೇ ಪ್ರೌಢಶಾಲೆಗಳು ಪ್ರವೇಶ ಪತ್ರವನ್ನು ಸಕಾಲದಲ್ಲಿ ವಿತರಿಸದೇ ಇದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಡಳಿತ ಉಪನಿರ್ದೇಶಕರು (9448999337), ಜಿಲ್ಲಾ ಎಸೆಸೆಲ್ಸಿ ನೋಡಲ್ ಅಧಿಕಾರಿ (7892758498), ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ (9480695156), ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ (9480695157), ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ (9480695158), ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ (9480695159), ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ (9480695160), ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ (9480695161), ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯನ್ನು (9480695162) ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಆಡಳಿತ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.