ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ: ಜು.19ರಂದು ರೆಡ್ ಅಲರ್ಟ್
ಜು.20ರಿಂದ 22ರವರೆಗೆ ಆರೆಂಜ್ ಅಲರ್ಟ್

ಮಂಗಳೂರು, ಜು.18: ಬಂಗಾಳ ಕೊಲ್ಲಿಯ ಉಪ ಸಾಗರದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ರವಿವಾರವೂ ದ.ಕ. ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ.
ಜು.19ರಂದೂ ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮತ್ತು ಜು.20ರಿಂದ 22ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಹಾಗೂ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
Next Story





