ಕಿನ್ನಿಗೋಳಿ: ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆ

ಮುಲ್ಕಿ, ಜು.18: ಕಿನ್ನಿಗೋಳಿಯ ಗೋಳಿಜೋರ ಎಂಬಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ಶನಿವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರನ್ನು ಗೋಳಿಜೋರ ನಿವಾಸಿ ನಿತಿನ್ (40) ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಇವರು ಕಳೆದ ವರ್ಷ ಕೊರೋನ ಲಾಕ್ಡೌನ್ ದಿನಗಳಲ್ಲಿ ಕೆಲಸ ತೊರೆದು ಮನೆಗೆ ಬಂದಿದ್ದರೆನ್ನಲಾಗಿದೆ. ಮನೆಯಲ್ಲಿ ತಾಯಿ, ಪತ್ನಿಯೊಂದಿಗೆ ಇದ್ದು, ಪತ್ನಿ ಶನಿವಾರ ತವರುಮನೆಗೆ ತೆರಳಿದ್ದರು. ನಿತಿನ್ ಶನಿವಾರ ರಾತ್ರಿ ತನ್ನ ಕೋಣೆಯಲ್ಲಿ ಫ್ಯಾನಿಗೆ ಚೂಡಿದಾರ ಶಾಲಿನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.
ರವಿವಾರ ಬೆಳಗ್ಗೆ ತುಂಬಾ ಹೊತ್ತಾದರೂ ಮಗ ಕೋಣೆಯಿಂದ ಹೊರಗೆ ಬಾರದಿರುವುದರಿಂದ ಸಂಶಯಗೊಂಡ ನೆರೆ ಮನೆಯವರನ್ನು ಕರೆದು ಕಿಟಕಿ ತೆರೆದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಳೆದೊಂದು ವರ್ಷದಿಂದ ಕೊರೊನ ಲಾಕ್ ಡೌನ್ ನಲ್ಲಿ ಕೆಲಸವಿಲ್ಲದೆ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.







