ಶ್ರೀಲಂಕಾ ವಿರುದ್ಧ ಮೊದಲ ಏಕದಿನ: ಸೂರ್ಯಕುಮಾರ್, ಇಶಾನ್ ಕಿಶನ್ ಗೆ ಚೊಚ್ಚಲ ಪಂದ್ಯ ಆಡುವ ಅವಕಾಶ

photo: BCCI
ಕೊಲಂಬೊ: ಭಾರತ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ರವಿವಾರ ಟಾಸ್ ಜಯಿಸಿರುವ ಶ್ರೀಲಂಕಾ ನಾಯಕ ದಸುನ್ ಶನಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಚೊಚ್ಚಲ ಪಂದ್ಯವನ್ನಾಡುವ ಅವಕಾಶ ಪಡೆದಿದ್ದಾರೆ. ಶ್ರೀಲಂಕಾದ ಪರ ಭಾನುಕಾ ರಾಜಪಕ್ಸ ಏಕದಿನ ಕ್ರಿಕೆಟ್ ಗೆ ಕಾಲಿಟ್ಟಿದ್ದಾರೆ.
ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ಇಶಾನ್ ಕಿಶನ್ ಅವರು ಜನ್ಮದಿನದಂದೇ ಏಕದಿನ ಕ್ರಿಕೆಟಿಗೆ ಕಾಲಿಟ್ಟಿರುವ ಭಾರತದ ಎರಡನೇ ಆಟಗಾರನಾಗಿದ್ದಾರೆ.
ದೀರ್ಘ ಸಮಯದ ಬಳಿಕ ಸ್ಪಿನ್ ದ್ವಯರಾದ ಕುಲದೀಪ್ ಯಾದವ್ ಹಾಗೂ ಯಜುವೇಂದ್ರ ಚಹಾಲ್ ಆಡುವ 11ರ ಬಳಗಕ್ಕೆ ವಾಪಸ್ ಆಗಿದ್ದಾರೆ. ಮನೀಷ್ ಪಾಂಡೆ ಹಾಗೂ ದೀಪಕ್ ಚಹಾರ್ ಜೊತೆಗೆ ಪಾಂಡ್ಯ ಸಹೋದರರಾದ ಹಾರ್ದಿಕ್ ಹಾಗೂ ಕೃನಾಲ್ ಆಡುವ ಬಳಗದಲ್ಲಿದ್ದಾರೆ.
Next Story





